ತುಮಕೂರು: ಸಮರ್ಥ, ಪ್ರಾಮಾಣಿಕ ಅಧಿಕಾರಿಗಳಿಗೆ ನಮ್ಮ ಸರಕಾರ ಹುದ್ದೆಗಳನ್ನು ನಿಯೋಜನೆ ಮಾಡುತ್ತದೆ. ಜಾತಿ ಆಧಾರದ ಮೇಲೆ ಅಧಿಕಾರಿಗಳನ್ನು ಹುದ್ದೆಗಳಿಗೆ ನಿಯೋಜನೆ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದರು.
ಮಾಧ್ಯಮದೊಂದಿಗೆ ಮಾತನಾಡಿ, ಜಾತಿ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಯು ತ್ತದೆ. ಜನರ ಪರವಾಗಿ ಕೆಲಸ ಮಾಡುವ, ಸರಕಾರದ ಯೋಜನೆಗಳನ್ನ ಜನರಿಗೆ ತಲುಪಿಸುವ ಸಮರ್ಥ, ದಕ್ಷ ಅಧಿಕಾರಿಗಳನ್ನು ನಮ್ಮ ಸರಕಾರ ಸೂಕ್ತ ಹುದ್ದೆಗಳಿಗೆ ನಿಯೋಜನೆ ಮಾಡುತ್ತದೆ ಎಂದರು.
ಲಿಂಗಾಯತರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಬೆಲೆ ಸಿಗುತ್ತಿಲ್ಲವೆಂದು ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅಸಮಾಧಾನ ಹೊರಹಾಕಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವ, ಅದನ್ನೆಲ್ಲ ಮುಖ್ಯಮಂತ್ರಿಗಳು ಗಮನಿಸುತ್ತಾರೆ. ಅಂತಹದ್ದೇ ನಾದರೂ ಇದ್ದರೆ ಸರಿಪಡಿಸಿಕೊಳ್ಳುತ್ತೇವೆ ಎಂದರು.