Thursday, 19th September 2024

ನ್ಯೂಸ್​ಕ್ಲಿಕ್​ ವೆಬ್​ಸೈಟ್​ಗೆ ದೆಹಲಿ ಪೊಲೀಸರ ದಾಳಿ

ನವದೆಹಲಿ: ಚೀನಾ ಕಂಪನಿಗಳಿಂದ ಅಕ್ರಮವಾಗಿ ಹಣ ಪಡೆದ ಪ್ರಕರಣಕ್ಕೆ ಸಂಬಂಧಿಸಿ ನ್ಯೂಸ್​ಕ್ಲಿಕ್ ಡಿಜಿಟಲ್ ಮಾಧ್ಯಮಕ್ಕೆ ಸಂಬಂಧಿಸಿದಂತೆ ವಿವಿಧ ಸ್ಥಳಗಳಲ್ಲಿ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ.

ನ್ಯೂಸ್​ಕ್ಲಿಕ್​ನ ಕೆಲವು ಪತ್ರಕರ್ತರ ಮನೆ ಮೇಲೆ ದಾಳಿ ನಡೆಸಲಾಗಿದೆ. ಆದರೇ ಯಾವುದೇ ಬಂಧನವಾಗಿಲ್ಲ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ದಾಳಿ ವೇಳೆ ಪತ್ರಕರ್ತರ ಲ್ಯಾಪ್‌ಟಾಪ್‌ ಮತ್ತು ಮೊಬೈಲ್ ಫೋನ್​ಗಳನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿ ದ್ದಾರೆ. ನ್ಯೂಸ್​ಕ್ಲಿಕ್​ ಸುದ್ಧಿ ಪೊರ್ಟಲ್​ ಚೀನಾದಿಂದ ಹಣ ಪಡೆಯುತ್ತಿದೆ ಎಂಬ ಆರೋಪದ ಮೇರೆಗೆ ದೆಹಲಿ ಪೊಲೀಸರು ಹೊಸ ಪ್ರಕರಣ ದಾಖಲಿಸಿಕೊಂಡು ಮತ್ತೆ ತನಿಖೆ ಆರಂಭಿಸಿದ್ದಾರೆ.

2021 ರಲ್ಲಿ, ದೆಹಲಿ ಪೊಲೀಸ್​ ಆರ್ಥಿಕ ಅಪರಾಧ ವಿಭಾಗವು ನ್ಯೂಸ್​ಕ್ಲಿಕ್‌ ಪಡೆದ ಅಕ್ರಮ ಹಣದ ಬಗ್ಗೆ ಮೊಟ್ಟ ಮೊದಲ ಬಾರಿಗೆ ಪ್ರಕರಣ ದಾಖಲಿಸಿ ಕೊಂಡಿತ್ತು. ಚೀನಾ ಕಂಪನಿಗಳ ಮೂಲಕ ಅಕ್ರಮವಾಗಿ ಮಾಧ್ಯಮ ಸಂಸ್ಥೆ ಹಣ ಪಡೆದುಕೊಂಡಿದೆ ಎಂದು ಎಫ್​ಐಆರ್​ನಲ್ಲಿ ದಾಖಲಿಸಲಾಗಿತ್ತು.

ಆಗಸ್ಟ್ 22 ರಂದು ನ್ಯೂಸ್‌ಕ್ಲಿಕ್‌ನ ಮುಖ್ಯ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರು, ದೆಹಲಿ ಪೋಲೀಸ್​​ನ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯು) ಸುದ್ದಿ ಮಾಧ್ಯಮ ಸಂಸ್ಥೆ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳದಂತೆ ಆದೇಶ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್​ ಮೆಟ್ಟಿಲು ಏರಿದ್ದರು.

Leave a Reply

Your email address will not be published. Required fields are marked *