Thursday, 26th December 2024

ಕೆಎಸ್ಒಯು: ಜುಲೈ ಆವೃತ್ತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ತುಮಕೂರು: ಯುಜಿಸಿ ನಿರ್ದೇಶನದ ಮೇರೆಗೆ ಕರಾಮುವಿಯು 2023-24ನೇ ಜುಲೈ ಆವೃತ್ತಿ ಪ್ರವೇಶಾತಿ ಅಂತಿಮ ದಿನಾಂಕವನ್ನು 2023ರ ಅಕ್ಟೋಬರ್ 20ರ ವರೆಗೆ ವಿಸ್ತರಿಸಲಾಗಿದೆ.

ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.

ಕೆಎಸ್‌ಒಯು ಯುಜಿಸಿಯಿಂದ ಮಾನ್ಯತೆ ಪಡೆದಿದೆ ಮತ್ತು ನ್ಯಾಕ್ ನಿಂದ “ಎ ಪ್ಲಸ್” ಮಾನ್ಯತೆ ಪಡೆದಿದೆ.

ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ.

“ಮೈಸೂರಿನ ಕರಾಮುವಿಯು ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯ ವಾಗಿರುತ್ತದೆ”.

ಮುಕ್ತ ವಿವಿಯಲ್ಲಿ ಪ್ರವೇಶಾತಿ ಪಡೆಯುವ SC/ST/OBC/Minority ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮು‌ಖಾಂತರ ವಿದ್ಯಾರ್ಥಿ ವೇತನ ಪಡೆಯಬಹುದು.

ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ:- ಬಿ.ಎ-ರೂ.7,700/-., ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-11,500/-., ಬಿ.ಕಾಂ.-ರೂ.8,200/-., ಬಿ.ಸಿ.ಎ/ಬಿ.ಎಸ್ಸಿ-ರೂ.22,500/-., ಬಿ.ಎಸ್.ಡಬ್ಲ್ಯೂ-ರೂ.12,000/-., ಎಂ.ಎ-ರೂ.9,800/-., ಎಂ.ಎಸ್ಸಿ/ಎಂ.ಬಿ.ಎ/ಎಂ.ಸಿ.ಎ-ರೂ.28,000/-., ಎಂ.ಕಾಂ-ರೂ.11,500/-. ಎಂ.ಸಿ.ಜೆ-ರೂ.15,100/-., ಎಂ.ಎಸ್.ಡಬ್ಲ್ಯೂ-ರೂ.20,000/-., ಎಂ.ಎಲ್.ಐ.ಎಸ್ಸಿ-ರೂ.17,000/-ಗಳಾಗಿರುತ್ತದೆ.

ಪ್ರಥಮ ವರ್ಷದ ಪ್ರವೇಶಾತಿಗೆ ಕೊನೆಯ ದಿನಾಂಕವನ್ನು ಅಕ್ಟೋಬರ್ 20ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕ ಡಾ. ಲೋಕೇಶ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌