Tuesday, 26th November 2024

ಪುಷ್ಪ ಹರಾಜು ಕೇಂದ್ರದಲ್ಲಿ ಬಾಡಿಗೆ ಮಳಿಗೆಗಳು ಲಭ್ಯ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ತುಮಕೂರು: ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಕಳ್ಳಂಬೆಳ್ಳ ಹೋಬಳಿ ಚಿಕ್ಕನಹಳ್ಳಿ ರಾಷ್ಟ್ರೀಯ ಹೆದ್ದಾರಿ-4ಕ್ಕೆ ಹೊಂದಿಕೊಂಡಿರುವಂತೆ ನಿರ್ಮಿಸಿ ರುವ ಪುಷ್ಪ ಹರಾಜು ಕೇಂದ್ರದಲ್ಲಿ ಖಾಲಿ ಇರುವ 5 ವಾಣಿಜ್ಯ ಮಳಿಗೆಗಳನ್ನು ಮಾಸಿಕ ಬಾಡಿಗೆ ಆಧಾರದ ಮೇರೆಗೆ ಬಾಡಿಗೆ ನೀಡಲು ಅರ್ಹ ವ್ಯಾಪಾರಸ್ಥ ರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 13ರವರೆಗೆ ವಿಸ್ತರಿಸಲಾಗಿದೆ.
ಅರ್ಹ ವ್ಯಾಪಾರಸ್ಥರು ಭರ್ತಿ ಮಾಡಿದ ಅರ್ಜಿಯನ್ನು ಸಹಾಯಕ ತೋಟಗಾರಿಕೆ ನಿರ್ದೇಶಕರು, ಪುಷ್ಪ ಹರಾಜು ಕೇಂದ್ರ, ಚಿಕ್ಕನಹಳ್ಳಿ ಇವರಿಗೆ ಅ.13 ರವರೆಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9481554308 ನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ” ನೀಡಲು ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2023ರ ಅಂಗವಾಗಿ ಬಾಲಕ ರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 06-18 ವರ್ಷದೊಳಗಿನ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
 ಪ್ರಕರಣವು 01-08-2022 ರಿಂದ 31-07-2023ರೊಳಗೆ ನಡೆದಿರಬೇಕು. ದಿನಾಂಕ:01-08-2005ರ0ದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.
2023-24ನೇ ಸಾಲಿನ ಪ್ರಶಸ್ತಿಗಾಗಿ ನಿಗಧಿಪಡಿಸಿರುವ ಅರ್ಜಿ ನಮೂನೆಗಳನ್ನು ಆಯಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ತುಮಕೂರು/ಮಧುಗಿರಿ, ಯುವಜನ ಸೇವೆ ಮತ್ತು ಸಬಲೀಕರಣ ಇಲಾಖೆ, ತುಮಕೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಮಕೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತುಮಕೂರು ಮತ್ತು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತುಮಕೂರು ಇವರುಗಳಿಂದ ಪಡೆದು, ಅರ್ಜಿಯನ್ನು ಕನ್ನಡದಲ್ಲಿಯೇ ಭರ್ತಿ ಮಾಡಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರಿಗೆ ಅಕ್ಟೋಬರ್ 13 ರೊಳಗೆ ಸಲ್ಲಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ.25 ಸಾವಿರ ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಮತ್ತು ಸಂಸ್ಥೆಗಳಿಗೆ ತಲಾ 1ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರಧಾನ ಮಾಡಿ ಗೌರವಿಸಲಾಗುವುದು.
2023ನೇ ಸಾಲಿನ ಪ್ರಶಸ್ತಿಗಾಗಿ ನಿಗಧಿಪಡಿಸಿರುವ ಅರ್ಜಿ ನಮೂನೆಯನ್ನು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇಲ್ಲಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಅಕ್ಟೋಬರ್ 13ರೊಳಗೆ ಸಲ್ಲಿಸುವುದು. ನಿಗಧಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲವೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.