ಮುಂಬೈ: ಮಹಾರಾಷ್ಟ್ರದ ಗೋರೆಗಾಂವ್ ನಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಯಲ್ಲಿ 7 ಮಂದಿ ಸಾವನ್ನ ಪ್ಪಿದ್ದು, ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತೀವ್ರ ಸಂತಾಪ ಸೂಚಿಸಿ ದ್ದಾರೆ.
ಘಟನೆ ನಿಜಕ್ಕೂ ದುರಾದೃಷ್ಟಕರ ಸಂಗತಿ. ಮೃತರ ಕುಟಂಬಕ್ಕೆ ಸಂತಾಪ ಸೂಚಿಸುತ್ತೇನೆ. ಅವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು.
ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಮುಂಬೈನ ಗೋರೆಗಾಂವ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಪ್ರಾಣಹಾನಿ ಯಾಗಿರುವ ಬಗ್ಗೆ ತಿಳಿದು ನೋವಾಗಿದೆ. ಘಟನೆ ಸಂಬಂಧ ಬಿಎಂಸಿ ಮತ್ತು ಮುಂಬೈ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ.
ಗಾಯಾಳುಗಳಿಗೆ ಎಲ್ಲಾ ರೀತಿಯ ನೆರವು ನೀಡಲಾಗುತ್ತಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬ ಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆಂದು ತಿಳಿಸಿದ್ದಾರೆ.