ನವದೆಹಲಿ : ಪಂಚರಾಜ್ಯಗಳ ಚುನಾವಣೆಗೆ ಆಯೋಗ ಸಜ್ಜಾಗಿದ್ದು, ಭಾನುವಾರ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ.
ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.
ಐದು ರಾಜ್ಯಗಳ ಪೈಕಿ ಮಧ್ಯಪ್ರದೇಶದಲ್ಲಿ ಮಾತ್ರ ಬಿಜೆಪಿ ಅಧಿಕಾರದಲ್ಲಿದ್ದರೆ, ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ತೆಲಂಗಾಣ ದಲ್ಲಿ ಭಾರತೀಯ ರಾಷ್ಟ್ರ ಸಮಿತಿ (ಬಿಆರ್ಎಸ್) ಮತ್ತು ಮಿಜೋರಾಂನಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಅಧಿಕಾರದಲ್ಲಿದೆ.
ತೆಲಂಗಾಣ, ರಾಜಸ್ಥಾನ, ಛತ್ತೀಸ್ ಗಢ ಮತ್ತು ರಾಜಸ್ಥಾನ ವಿಧಾನಸಭೆಗಳ ಅವಧಿ ಮುಂದಿನ ವರ್ಷ ಜನವರಿಯಲ್ಲಿ ವಿಭಿನ್ನ ದಿನಾಂಕಗಳಲ್ಲಿ ಕೊನೆ ಗೊಳ್ಳಲಿದೆ. ಮಿಜೋರಾಂ ವಿಧಾನಸಭೆಯ ಅವಧಿ ಈ ವರ್ಷದ ಡಿಸೆಂಬರ್ 17 ರಂದು ಕೊನೆಗೊಳ್ಳುತ್ತದೆ. ಈಶಾನ್ಯ ರಾಜ್ಯದಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಅಧಿಕಾರದಲ್ಲಿದೆ.