ಶಿಮ್ಲಾ : ವಿಶ್ವದ ಅತಿ ಉದ್ದವಾದ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಿಮಾಚಲ ಪ್ರದೇಶದ ಅಟಲ್ ಸುರಂಗ ಮಾರ್ಗ ವನ್ನು ಅ.3ರಂದು ಪ್ರಧಾನಿ ನರೇಂದ್ರ ಮೋದಿ ಉದ್ಧಾಟಿಸ ಲಿದ್ದಾರೆ.
ಈ ಸುರಂಗವು ಮನಾಲಿ ಮತ್ತು ಲೇಹ್ ನಡುವಿನ ಅಂತರವನ್ನು 46 ಕಿಮೀ ಕಡಿಮೆ ಮಾಡಲಿದೆ. ಹಾಗೂ ನಾಲ್ಕು ಗಂಟೆಗಳ ಪ್ರಯಾಣದ ಅವಧಿ ಸಹ ಉಳಿತಾಯವಾಗಲಿದೆ . ಅಂದು ಪ್ರಧಾನಿ ಮೋದಿ ಮನಾಲಿಗೆ ಭೇಟಿ ನೀಡುತ್ತಿದ್ದು, ಬಳಿಕ ಲಾಹೌಲ್ ಗೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಬರೋಬ್ಬರಿ 10 ಸಾವಿರ ಅಡಿಗಿಂತ ಹೆಚ್ಚು ಉದ್ದವಾಗಿರುವ ವಿಶ್ವದ ಅತಿ ಉದ್ದವಾದ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಅಟಲ್ ಸುರಂಗ ಮಾರ್ಗ ಪಾತ್ರವಾಗಿದೆ.
ನಾಳೆ ಅಟಲ್ ಟನೆಲ್ ಸುರಂಗ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇಲ್ಲಿಗೆ ಆಗಮಿಸಲಿದ್ದಾರೆ. ಎಲ್ಲಾ ಸಿದ್ದತೆಗಳು ಕೊನೆ ಹಂತದಲ್ಲಿವೆ. ಇದು ಒಂದು ಐತಿಹಾಸಿಕ ದಿನವಾಗಲಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಹೇಳಿದ್ದಾರೆ.