ತಮಿಳುನಾಡು/ ಮಹಾರಾಷ್ಟ್ರ : ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬುಧವಾರ ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಎನ್ಐಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.
ಎನ್ಐಎ ಅಧಿಕಾರಿಗಳು ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮುಖಂಡರ ಮನೆ ಮೇಲೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ತಮಿಳುನಾಡಿನ ಮಧುರೈ ಜಿಲ್ಲೆಯ ಹಲವು ಕಡೆಗಳಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಜಿಮಾರ್ ಸ್ಟ್ರೀಟ್ನಲ್ಲಿ ಅಧಿಕಾರಿಗಳು ಕಾರ್ಯಾ ಚರಣೆ ನಡೆಸಿದ್ದಾರೆ. ಜಮಾತ್ ಹಿಂದ್ ಮೂವ್ಮೆಂಟ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತಾಜುದ್ದೀನ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಘಟನೆ ಹಲವರು ಸರ್ಕಾರದ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ನಡೆಸು ತ್ತಿರುವುದಾಗಿ ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದ ಮುಂಬೈ ಸೇರಿದಂತೆ ಹಲವು ಕಡೆಗಳಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 2006ರ ಮುಂಬೈ ರೈಲ್ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ವಾಹಿದ್ ಶೇಖ್ನ ಮನೆ ಮೇಲೆ ಎನ್ಐಎ ದಾಳಿ ನಡೆಸಿದೆ. ವಿಖ್ರೋಲಿಯಲ್ಲಿರುವ ಆರೋಪಿಯ ಮನೆಯಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.