ಹೆರಾತ್: ಸರಣಿ ಭೂಕಂಪಗಳಿಂದ ಜರ್ಜರಿತವಾಗಿರುವ ಆಫ್ಘನಿಸ್ತಾನದಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದೆ. ಬೆಳಗ್ಗೆ 6.1ತೀವ್ರತೆಯ ಪ್ರಬಲ ಭೂಕಂಪ ಉಂಟಾಗಿದ್ದು, ಪ್ರಾಣಹಾನಿ ಬಗ್ಗೆ ವರದಿಗಳಿಲ್ಲ.
ಹೆರಾತ್ ರಾಜಧಾನಿಯಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.
ಭೂಕಂಪನದಿಂದಾಗಿ 465 ಮನೆಗಳು ಸಂಪೂರ್ಣ ನೆಲಸಮವಾಗಿದ್ದು, 135ಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿದಿವೆ. ಸರಣಿ ಭೂಕಂಪಗಳಿಂದ ದೂರವಾಣಿ, ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ರಕ್ಷಣಾ ಕಾರ್ಯದಲ್ಲಿ ಅಡಚಣೆಯುಂಟಾಗಿದೆ.
ಸರಣಿ ಭೂಕಂಪಗಳಲ್ಲಿ ಸತ್ತವರ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಿದೆ. ಇನ್ನೂ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಅವಶೇಷಗಳಡಿ ಮೃತದೇಹಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.