ನವದೆಹಲಿ: ತಮಿಳುನಾಡಿಗೆ ಮತ್ತೆ ಮೂರು ಸಾವಿರ ಕ್ಯೂಸಕ್ ನೀರು ಹರಿಸಲು ಸಿ ಡಬ್ಲ್ಯೂ ಆರ್ ಸಿ ಕರ್ನಾಟಕಕ್ಕೆ ಸೂಚಿಸಿದೆ ಎಂದು ತಿಳಿದುಬಂದಿದೆ.
ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯುತ್ತಿದ್ದು, 15 ದಿನಗಳ ಕಾಲ 13 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ತಮಿಳುನಾಡು ಬೇಡಿಕೆ ಇಟ್ಟಿತ್ತು. ಅದರೆ CWRC ಕರ್ನಾಟಕಕ್ಕೆ 15 ದಿನಗಳ ಕಾಲ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಅಧಿಕಾರಿಗಳು ಭಾಗಿಯಾ ಗಿದ್ದು, ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗಿದೆ. ಮಳೆಯಾಗುತ್ತಿದ್ದರೂ ಕರ್ನಾಟಕ ಸರಿಯಾಗಿ ನೀರು ಹರಿಸಿಲ್ಲ ಎಂದು ವಾದ ಮಂಡಿಸಿದೆ.
ಮಳೆ ಹೆಚ್ಚಾಗಿರುವ ಪ್ರಮಾಣ ಆಧರಿಸಿ ನೀರನ್ನು ಹರಿಸಬೇಕು. ಪ್ರತಿದಿನ 13000 ಕ್ಯೂಸೆಕ್ ನೀರು ಹರಿಸಬೇಕು ಎಂದು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ತಮಿಳುನಾಡು ಅಧಿಕಾರಿಗಳು ವಾದ ಮಂಡಿಸಿದ್ದಾರೆ.