ಪುಣೆ: ಪಿಂಪ್ರಿ ಚಿಂಚ್‌ವಾಡ್ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೋಮನಾಥ್ ಝೆಂಡೆ ಆನ್‌ಲೈನ್ ಗೇಮಿಂಗ್ನಲ್ಲಿ 1.5 ಕೋಟಿ ಬಹುಮಾನ ಗೆದ್ದಿದ್ದರು. ಆದರೆ, ಅವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
”ಕರ್ತವ್ಯದ ವೇಳೆ ಆನ್‌ಲೈನ್ ಗೇಮಿಂಗ್ನಲ್ಲಿ ತೊಡಗಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿ ಬಿಜೆಪಿ ಮುಖಂಡ ಅಮೋಲ್ ಥೋರಟ್, ಗೃಹ ಸಚಿವ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆದಿದ್ದಾರೆ.
ಪಿಎಸ್‌ಐ ಸೋಮನಾಥ್ ಝೆಂಡೆ ಅವರನ್ನು ಪಿಂಪ್ರಿ ಚಿಂಚ್ವಾಡ್ ಪೊಲೀಸ್ ಹೆಡ್ಕ್ವಾರ್ಟರ್ಸ್ನಲ್ಲಿ ಆರ್ಸಿಪಿ ಯಲ್ಲಿ ನಿಯೋಜಿಸಲಾಗಿದೆ. ಮಂಗಳವಾರ ಬಾಂಗ್ಲಾದೇಶ ವಿರುದ್ಧ ಇಂಗ್ಲೆಂಡ್‌ನ ಕ್ರಿಕೆಟ್ ಪಂದ್ಯದಲ್ಲಿ ಅವರ ತಂಡವು ಆನ್‌ಲೈನ್ ಗೇಮಿಂಗ್ ಆಯಪ್ನಲ್ಲಿ 1.5 ಕೋಟಿ ಬಹುಮಾನ ಗೆದ್ದಿತ್ತು.
ಕರ್ತವ್ಯದ ವೇಳೆ ಆನ್‌ಲೈನ್ ಗೇಮಿಂಗ್ನಲ್ಲಿ ತೊಡಗಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೋಮನಾಥ್ ಝೆಂಡೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಪಿಎಸ್‌ಐ ಸೋಮನಾಥ್ ಝೆಂಡೆ ಖಾಕಿ ಸಮವಸ್ತ್ರದಲ್ಲಿರುವ ಫೋಟೋಗಳು ಮತ್ತು ವಿಡಿಯೋಗಳೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅವರು ಉತ್ತಮ ಕೆಲಸ ಮಾಡಿ ದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದು ರಾಜ್ಯ ಪೊಲೀಸ್ ಪಡೆ ಬಗ್ಗೆ ತಪ್ಪು ಸಂದೇಶ ರವಾನೆಯಾಗಿದೆ.
ಈ ಬಗ್ಗೆ ಆಡಳಿತಾತ್ಮಕ ಮತ್ತು ಕಾನೂನು ವಿಷಯಗಳ ಅಡಿ ಸಮಗ್ರ ತನಿಖೆ ನಡೆಸಿ ಸೋಮನಾಥ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಉಪ ಪೊಲೀಸ್ ಆಯುಕ್ತ ಗೋರೆ ಅವರು ಈ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ” ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.