ಚೆನ್ನೈ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಭಾಗವಾಗಿ ಶುಕ್ರವಾರ ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ರು. ಎದುರಾಳಿ ನಾಯಕ ಶಾಕಿಬ್ ಅಲ್ ಹಸನ್ ಮುಂದಾಳತ್ವದ ಬಾಂಗ್ಲಾ ತಂಡ ಬ್ಯಾಟಿಂಗ್ಗೆ ಮುಂದಾಗಿದೆ.
ಇತ್ತೀಚಿನ ವರದಿ ಪ್ರಕಾರ, ಬಾಂಗ್ಲಾದೇಶ 5 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತ್ತು. ಕೀಪರ್ ರಹೀಮ್ ಅರ್ಧಶತಕ ಸಿಡಿಸಿದರು. ನಾಯಕ ಶಕೀಬ್ ಅಲ್ ಹಸನ್ ೪೦ ರನ್ ಬಾರಿಸಿ ವೇಗಿ ಫರ್ಗ್ಯೂಸನ್‌ಗೆ ವಿಕೆಟ್ ಒಪ್ಪಿಸಿದರು.
ಆಡುವ 11ರ ಬಳಗ: ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ಬಾಂಗ್ಲಾದೇಶ ತಂಡ: ಲಿಟ್ಟನ್ ದಾಸ್, ತಂಝಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯೋಯ್, ಮಹಮ್ಮದುಲ್ಲಾ, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್.