ತುಮಕೂರು: ಉಪವಿಭಾಗಾಧಿಕಾರಿ ಕಚೇರಿಗೆ ಯುಪಿಎಸ್ ಅಳವಡಿಸಿ ಬೆಳಕಿನ ವ್ಯವಸ್ಥೆ ಮಾಡಲಾಗಿದೆ.
ಪತ್ರಿಕೆಯಲ್ಲಿ ಲೋಡ್ ಶೆಡ್ಡಿಂಗ್ : ಮೊಬೈಲ್ ಬೆಳಕಲ್ಲಿ ನಡೆದ ಕಲಾಪ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಗೊಂಡಿತ್ತು. ಪರಿಣಾಮವಾಗಿ ಯುಪಿಎಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ವಿದ್ಯುತ್ ಕಣ್ಣ ಮುಚ್ಚಾಲೆಯಿಂದಾಗಿ ಜಿಲ್ಲೆಯಲ್ಲಿ ಲೋಡ್ಶೆಡ್ಡಿಂಗ್ ನಿರಂತರವಾಗಿ ನಡೆಯುತ್ತಿದೆ . ಇದರ ಪರಿಣಾಮವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿದ್ಯುತ್ ಇಲ್ಲದೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಉಪವಿಭಾಗಾಧಿಕಾರಿ ಗೌರವಕುಮಾರ್ಶೆಟ್ಟಿ ಕೋರ್ಟ್ ಕಲಾಪ ನಡೆಸಿದ್ದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿದ್ಯುತ್ ಕೈಕೊಟ್ಟಿದ್ದು ಜಿಲ್ಲಾಧಿಕಾರಿ ಕಚೇರಿ ಸಂಕಿರ್ಣದಲ್ಲಿರುವ ಉಪವಿಭಾಗಾಧಿಕಾರಿಗಳ ನ್ಯಾಯಾಲಯದ ಕಲಾಪ ಕೂಡ ಮೊಬೈಲ್ ಬೆಳಕಿನಲ್ಲಿ ನಡೆದಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ ವಿದ್ಯುತ್ ಕೈಕೊಟ್ಟರೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗಿತ್ತು.