Wednesday, 30th October 2024

ಶಾಲಾ-ಕಾಲೇಜು ಆರಂಭಕ್ಕೆ ಸರ್ಕಾರ ಹಸಿರು ನಿಶಾನೆ

ಬೆಂಗಳೂರು : ಕೊರೊನಾ ಆರ್ಭಟದ ನಡುವೆಯೇ ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗ ಸೂಚಿ ಪ್ರಕಟ ಮಾಡಿದೆ. ಆ ಮಾರ್ಗಸೂಚಿಯ ಪ್ರಕಾರ ಹಂತ ಹಂತವಾಗಿ ಶಾಲಾ ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಇದೇ ಅಕ್ಟೋಬರ್ 15ರಿಂದ ಹಂತ ಹಂತವಾಗಿ ಶಾಲಾ ಕಾಲೇಜ್​ ಪುನರ್​ ಆರಂಭ ಮಾಡುವ ಕುರಿತು ರಾಜ್ಯ ಸರ್ಕಾರ ತಿಳಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ ಹಂತ ಹಂತವಾಗಿ ಶಾಲೆ ಆರಂಭಿಸುವುದಾಗಿ ತಿಳಿಸಿದೆ.

ಮಾರ್ಗ ಸೂಚಿ ಪ್ರಕಟಿಸಿರುವ ರಾಜ್ಯ ಸರ್ಕಾರ ಆಯಾ ಶಿಕ್ಷಣ ಸಂಸ್ಥೆಗಳೊಡನೆ ಚರ್ಚೆ ನಡೆಸಿ ಶಾಲಾ-ಕಾಲೇಜು ಆರಂಭಕ್ಕೆ ಮುಂದಾಗಿದೆ. ಆನ್​ಲೈನ್​ ತರಗತಿಗೂ ಕೂಡ ಅದು ಒತ್ತು ನೀಡಿದ್ದು, ಮುಂದುವರೆಸಲು ಶಿಕ್ಷಣ ಸಂಸ್ಥೆಗಳು ಇಚ್ಚಿಸಿದರೆ ಅವಕಾಶ ಇದೆ ಎಂದಿದೆ. ಈ ಕೆಲವು ಸುರಕ್ಷತಾ ಕ್ರಮಗಳೊಂದಿಗೆ ಶಾಲಾ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ.

1) ಹಾಜರಾತಿ ಕಡ್ಡಾಯವಲ್ಲ. ವಿದ್ಯಾರ್ಥಿಗಳು ಹಾಜರಾಗುವ ಕುರಿತು ಪೋಷಕರದ್ದೇ ಅಂತಿಮ ತೀರ್ಮಾನ.

2) ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಲು ಬಯಸಿದ್ದರೆ, ಪೋಷಕರಿಂದ ಅನುಮತಿ ಪತ್ರ ಕಡ್ಡಾಯವಾಗಿದೆ.