Friday, 22nd November 2024

ಉತ್ತರಪ್ರದೇಶದಲ್ಲಿ ಡೆಂಘೀ: 600 ಹೊಸ ಪ್ರಕರಣ ಪತ್ತೆ

ತ್ತರಪ್ರದೇಶ: ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈವರೆಗೆ ಸುಮಾರು 24 ಮಂದಿ ಮೃತ ಪಟ್ಟಿದ್ದಾರೆ.

ಲಕ್ನೋ, ಮೊರಾದಾಬಾದ್ , ಮೀರತ್ , ಕಾನ್ಪುರ ಮತ್ತು ನೋಯ್ಡಾ ಉತ್ತರ ಪ್ರದೇಶದಲ್ಲಿ ಹೆಚ್ಚಿನ ಡೆಂಗ್ಯೂ ಪ್ರಕರಣಗಳು ದಾಖಲಾಗುತ್ತಿವೆ. ರಾಜ್ಯದಲ್ಲಿ ಈವರೆಗೆ 13,000 ಡೆಂಘೀ ಪ್ರಕರಣಗಳು ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 600 ಹೊಸ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯ ಸರ್ಕಾರದ ಅಂಕಿಅಂಶಗಳ ಪ್ರಕಾರ ಈವರೆಗೆ ರಾಜ್ಯದಲ್ಲಿ 24 ಮಂದಿ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ. ಹವಾಮಾನ ವೈಪರೀತ್ಯ ಕಾರಣ, ಡೆಂಘೀ ಪ್ರಕರಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಲಕ್ನೋದಲ್ಲಿರುವ ಆಸ್ಪತ್ರೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಡೆಂಘೀ ರೋಗಿಗಳಿಗೆ ಡಯಾಲಿಸಿಸ್ ಮತ್ತು ವೆಂಟಿಲೇಟರ್ ನ ಅಗತ್ಯವಿರುವುದು ಕಂಡು ಬಂದಿದೆ.