Monday, 6th January 2025

ಬಿಗ್‌ ಬಾಸ್ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್​​ ಬಂಧನ: 14 ದಿವಸ ನ್ಯಾಯಾಂಗ ಬಂಧನ

ಬೆಂಗಳೂರು: ಚಿನ್ನದ ಸರದಲ್ಲಿ ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್‌ ಬಾಸ್ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್​​ರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಸದ್ಯ ಸಂತೋಷ್ ಅವರನ್ನು ಕರೆತಂದಿರುವ ರಾಮೋಹಳ್ಳಿ ಅರಣ್ಯಾಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರಿಗೆ ಸಂಕಷ್ಟ ಎದುರಾಗಿದೆ. ಅರಣ್ಯ ಇಲಾಖೆ ಸಂತೋಷ್ ಆಪ್ತ ರಂಜಿತ್ ಹಾಗೂ ಚಿನ್ನದಂಗಡಿ ಮಾಲೀಕನಿಗೆ ನೋಟಿಸ್ ಜಾರಿ ಮಾಡಲಾಗಿದೆ.

ತನಿಖೆಯ ಸಂದರ್ಭ ಸಂತೋಷ್​, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅಸ್ಪಷ್ಟ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ. ಲಾಕೇಟ್ ಮಾಡಿಕೊಟ್ಟ ಚಿನ್ನದ ಅಂಗಡಿ ಮಾಲೀಕ ಹೊಸೂರು ಮೂಲದ ವರ್ತೂರಿವರಾಗಿದ್ದು, ಈ ಹಿನ್ನಲೆಯಲ್ಲಿ ಹುಲಿ ಉಗುರು ಮೂಲ ಕೆದಕಲು ಅರಣ್ಯ ಇಲಾಖೆ ತನಿಖೆ ಮುಂದುವರಿದೆ.

ವರ್ತೂರು ಸಂತೋಷ್​​ರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ತಡರಾತ್ರಿ ಅರೆಸ್ಟ್ ಮಾಡಿದ್ದರು. ಕೊರಳಿಗೆ ಹುಲಿ ಉಗುರಿನ ಲಾಕೇಟ್ ಹಾಕೊಂಡಿದ್ದ ಕಾರಣಕ್ಕೆ ಬಿಗ್‌ಬಾಸ್‌ ಮನೆಯಿಂದಲೇ ಅರೆಸ್ಟ್ ಮಾಡಲಾಗಿತ್ತು. ಸದ್ಯ ಕೋರ್ಟ್ ಸಂತೋಷ್​​ಗೆ 14 ದಿವಸ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ವರ್ತೂರು ಸಂತೋಷ್ ಪರ ವಕೀಲ ನಟರಾಜ್‌, ಜಾಮೀನು ಅರ್ಜಿ ಹಾಕಿದ್ದೀವಿ‌. ಬುಧವಾರ ವಿಚಾರಣೆ ಇದೆ. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *