ಚಿಕ್ಕಮಗಳೂರು: ದತ್ತ ಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ನವೆಂಬರ್ 1 ರಿಂದ 6ರವರೆಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣ ಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿಯ ನ್ನು ನಿರ್ಬಂಧಿಸಲಾಗಿದೆ.
ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ಹೆಚ್ಚಿನ ಭಕ್ತರು ಜಿಲ್ಲೆಗೆ ಭೇಟಿ ನೀಡಲಿದ್ದು, ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಮೂರು ದಿನ ಗಳಲ್ಲಿ ಗಿರಿ ಭಾಗ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಅಕ್ಟೋಬರ್ 30 ರಿಂದ ನವೆಂಬರ್ 5 ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಡಳಿತ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ದತ್ತಮಾಲಾ ಅಭಿಯಾನಕ್ಕೂ ಮುನ್ನ ದತ್ತಪೀಠಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.