ಬೆಂಗಳೂರು: ನವೆಂಬರ್ 1ರಿಂದ ಮುಂದಿನ ವರ್ಷ ನವೆಂಬರ್ 30ರವರೆಗೆ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ಕರ್ನಾಟಕದ ಇತಿಹಾಸ ಕಲೆ ಸಾಹಿತ್ಯ ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಯುವಜನತೆಯಲ್ಲಿ ಕನ್ನಡ ಕನ್ನಡಿಗ ಕರ್ನಾಟಕದ ಬಗ್ಗೆ ಅರಿವು ಮೂಡಿಸಲಾಗುವುದು. ನವೆಂಬರ್ ಒಂದರಂದು ಪ್ರತಿ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಿಂದ ಧ್ವಜಾ ರೋಹಣ ನೆರವೇರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರಿಂದ ಕನ್ನಡ ಧ್ವಜಾರೋಹಣ ನೆರವೇರಿಸಲಾಗುವುದು. ಮನೆಗಳ ಮುಂದೆ ಕೆಂಪು ಹಳದಿ ಬಣ್ಣದ ರಂಗೋಲಿ ಬಿಡಿಸಲು ಮನವಿ ಮಾಡಲಾಗಿದೆ. ಉಸಿರಾಯಿತು ಕರ್ನಾಟಕ ಹೆಸರಾಗಲಿ ಕನ್ನಡ ಎನ್ನುವ ಘೋಷವಾಕ್ಯದೊಂದಿಗೆ ನವೆಂಬರ್ ಒಂದರ ಸಂಜೆ ಹಣತೆ ಯಲ್ಲಿ ಕನ್ನಡ ಜ್ಯೋತಿ ಬೆಳಗಿಸಲು ಮನವಿ ಮಾಡಲಾಗಿದೆ.
ಪ್ರತಿಮನೆ ಕಚೇರಿ ಅಂಗಡಿ ಮಳಿಗೆಗಳ ಮುಂದೆ ಜ್ಯೋತಿ ಬೆಳಗಿಸಲು ಮನವಿ ಮಾಡಲಾಗಿದೆ.
ರೂಟ್ ಮ್ಯಾಪ್ ನಂತೆ ರಥಯಾತ್ರೆ ಹಾಗೂ ಜ್ಯೋತಿ ಸಾಗಲಿದೆ. ಬೆಂಗಳೂರಿನಲ್ಲಿ ಭುವನೇಶ್ವರಿ ಪ್ರತಿಮೆ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಮೈಸೂರಿ ನಲ್ಲಿ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪಿಸಲು ತೀರ್ಮಾನಿಸಲಾಗಿದೆ ಎಂದು ವಿಕಾಸಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ನೀಡಿದರು.