ಇಟಲಿ: ಟಾಲಿವುಡ್ ನಟರಾದ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ನವೆಂಬರ್ 1ರಂದು ಇಟಲಿಯಲ್ಲಿ ಮದುವೆಯಾಗಲಿದ್ದಾರೆ.
ಟಾಲಿವುಡ್ ನಿರ್ಮಾಪಕ ನಾಗೇಂದ್ರ ಬಾಬು ಅವರ ಪುತ್ರ ಮೆಗಾ ಪ್ರಿನ್ಸ್ ವರುಣ್ ತೇಜ್ ದಾಂಪತ್ಯ ಜೀವನಕ್ಕೆ ಕಾಲಿಡಲು ತಯಾರಾಗಿದ್ದಾರೆ.
ಜೂನ್ 9ರಂದು ನಟಿ ಲಾವಣ್ಯ ತ್ರಿಪಾಠಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿರುವ ನಟ ಅದ್ಧೂರಿಯಾಗಿ ಮದುವೆಯಾಗಲಿದ್ದಾರೆ. ನವೆಂಬರ್ 1ರಂದು ಇಟಲಿಯಲ್ಲಿ ವಿವಾಹ ಸಮಾರಂಭ ನಡೆಯಲಿದೆ. ಮೂರು ದಿನಗಳ ಕಾಲ ಡೆಸ್ಟಿನೇಶನ್ ವೆಡ್ಡಿಂಗ್ ಪ್ಲಾನ್ ಮಾಡಲಾಗಿದೆ.
ಹೈದರಾಬಾದ್ನ ವಿಮಾನ ನಿಲ್ದಾಣದಲ್ಲಿ ವರುಣ್ ವೈಟ್ ಟಿ-ಶರ್ಟ್ಗೆ ಬ್ಲ್ಯಾಕ್ ಜಾಕೆಟ್ ಮತ್ತು ಡೆನಿಮ್ ಧರಿಸಿದ್ದರು. ಲಾವಣ್ಯ ತ್ರಿಪಾಠಿ ಬೀಜ್ ಬಾಡಿಕಾನ್ ಡ್ರೆಸ್ನ್ನು ಆಯ್ಕೆ ಮಾಡಿಕೊಂಡಿದ್ದರು. ಇವರೊಂದಿಗೆ ವರುಣ್ ಸಹೋದರಿ ನಿಹಾರಿಕಾ ಕೊನಿಡೇಲಾ ಮತ್ತು ನಟನ ಸೋದರ ಸಂಬಂಧಿ ವೈಷ್ಣವ್ ತೇಜ್ ಕೂಡ ಇದ್ದರು.
ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಮದುವೆ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಮದುವೆ ನವೆಂಬರ್ 1ರಂದು ಇಟಲಿಯ ಟಸ್ಕನಿಯ ಬೊರ್ಗೊ ಸ್ಯಾನ್ ಫೆಲಿಸ್ ರೆಸಾರ್ಟ್ನಲ್ಲಿ ನಡೆಯಲಿದೆ. ಅದಕ್ಕೂ ಮುನ್ನ ಅಕ್ಟೋಬರ್ 30ರಂದು ಕಾಕ್ಟೈಲ್ ನೈಟ್ನೊಂದಿಗೆ ಮದುವೆ ಸಂಭ್ರಮ ಶುರುವಾಗಲಿದೆ. ಅಕ್ಟೋಬರ್ 31ರಂದು ಹಳದಿ ಮತ್ತು ಮೆಹಂದಿ ಕಾರ್ಯಕ್ರಮಗಳು ನಡೆಯಲಿದೆ. ವಿವಾಹದ ನಂತರ ಈ ದಂಪತಿ ತಮ್ಮ ಉದ್ಯಮದ ಸಹದ್ಯೋಗಿಗಳು, ಸ್ನೇಹಿತರಿಗಾಗಿ ಹೈದರಾಬಾದ್ನಲ್ಲಿ ಆರತಕ್ಷತೆಯನ್ನು ಆಯೋಜಿಸುವ ನಿರೀಕ್ಷೆಯಿದೆ.