Friday, 22nd November 2024

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ

ನವದೆಹಲಿ: ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಟ್ಟಿದ್ದು, ಶನಿವಾರ ‘ಅತ್ಯಂತ ಕಳಪೆ’ ವರ್ಗದಲ್ಲಿ ದಾಖಲಾಗಿದೆ.

ಪ್ರತಿಕೂಲವಾದ ಹವಾಮಾನ ಪರಿಸ್ಥಿತಿಗಳಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಮತ್ತಷ್ಟು ಹದಗೆಡುವ ಮುನ್ಸೂಚನೆ ಇದೆ. ನಗರದ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ ಮಧ್ಯಾಹ್ನ 301 ರಷ್ಟು ದಾಖಲಾಗಿದೆ.

ಗಾಜಿಯಾಬಾದ್ನಲ್ಲಿ 286, ಫರಿದಾಬಾದ್ನಲ್ಲಿ 268, ಗುರುಗ್ರಾಮ್ನಲ್ಲಿ 248, ನೋಯ್ಡಾದಲ್ಲಿ 284 ಮತ್ತು ಗ್ರೇಟರ್ ನೋಯ್ಡಾದಲ್ಲಿ 349 ದಾಖಲಾಗಿದೆ.

ಸೊನ್ನೆಯಿಂದ 50 ರ ನಡುವಿನ AQI ಅನ್ನು ‘ಉತ್ತಮ’, 51 ರಿಂದ 100 ‘ತೃಪ್ತಿದಾಯಕ’, 101 ರಿಂದ 200 ‘ಮಧ್ಯಮ’, 201 ರಿಂದ 300 ‘ಕಳಪೆ’, 301 ರಿಂದ 400 ‘ಅತ್ಯಂತ ಕಳಪೆ’ ಮತ್ತು 401 ರಿಂದ 500 ಅತ್ಯಂತ ‘ಗಂಭೀರ’ ಎಂದು ಪರಿಗಣಿಸಲಾಗುತ್ತದೆ.

ದೆಹಲಿಯಲ್ಲಿ ಈ ತಿಂಗಳ ಅಂತ್ಯದವರೆಗೂ ಗಾಳಿಯ ಗುಣಮಟ್ಟ ತುಂಬಾ ಕಳಪೆಯಾಗಿ ಉಳಿಯುವ ನಿರೀಕ್ಷೆಯಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಹೇಳಿದೆ.