Friday, 22nd November 2024

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್’ಗೆ ಡೆಂಘೀ

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಡೆಂಘೀ ಜ್ವರ ಮತ್ತು ದೌರ್ಬಲ್ಯದಿಂದ ಬಳಲುತ್ತಿದ್ದು, ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಎನ್‍ಸಿಪಿ ನಾಯಕ ಸುನೀಲ್ ತಟ್ಕರೆ (ಅಜಿತ್ ಪವಾರ್ ಗುಂಪಿನ) ಡಾ ಸಂಜಯ್ ಕಪೋಟೆ ಅವರು, ಉಪ ಮುಖ್ಯಮಂತ್ರಿಗಳ ಪ್ಲೇಟ್‍ಲೆಟ್ ಮತ್ತು ಬಿಳಿ ರಕ್ತ ಕಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿದರು.

ಕಳೆದ ಮೂರ್ನಾಲ್ಕು ದಿನಗಳಿಂದ ಅವರು ಡೆಂಘೀ ಸೋಂಕಿನಿಂದ ಬಳಲುತ್ತಿದ್ದಾರೆ. ಅವರಿಗೆ ಜ್ವರ ಮತ್ತು ದೌರ್ಬಲ್ಯವಿದೆ ಮತ್ತು ವಿಶ್ರಾಂತಿ ಅಗತ್ಯವಿದೆ ಎಂದು ಕಪೋಟೆ ಹೇಳಿದರು. ಸೋನೋಗ್ರಫಿ ಜೊತೆಗೆ ಅವರ ಪ್ಲೇಟ್‍ಲೆಟ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಅದರಂತೆ ಆಸ್ಪತ್ರೆಗೆ ದಾಖಲಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಪವಾರ್ ಅವರು ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಗೆ ಹಾಜರಾಗಿರಲಿಲ್ಲ. ಎನ್‍ಸಿಪಿ ನಾಯಕ ಪ್ರಫುಲ್ ಪಟೇಲ್ ಮಾತನಾಡಿ, ಪವಾರ್‌ಗೆ ಡೆಂಘೀ ಇರುವುದು ಪತ್ತೆಯಾಗಿದ್ದು, ಮುಂದಿನ ಕೆಲವು ದಿನಗಳವರೆಗೆ ವೈದ್ಯಕೀಯ ಮಾರ್ಗದರ್ಶನ ಮತ್ತು ವಿಶ್ರಾಂತಿಯಲ್ಲಿರುತ್ತಾರೆ ಎಂದು ತಿಳಿಸಿದ್ದಾರೆ.