Sunday, 15th December 2024

ಡೆಪ್ಯೂಟಿ ಡೈರೆಕ್ಟರ್ ಕೊಲೆ ಪ್ರಕರಣ: ಆರೋಪಿಗೆ 15 ದಿನ ಪೊಲೀಸ್ ಕಸ್ಟಡಿ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್ ಪ್ರತಿಮಾ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಿರಣ್ ಗೆ ನ್ಯಾಯಾ ಲಯವು 15 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಭಾನುವಾರ ಸರ್ಕಾರಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಚಾಮರಾಜನಗರದಲ್ಲಿ ಮಾಜಿ ಕಾರು ಚಾಲಕ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆತನನ್ನು ಸೋಮವಾರ ಬೆಂಗಳೂರಿನ 2ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ಈ ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರ ಮುಂದೆ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ ನಡೆಸುವುದಕ್ಕೆ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಕೋರಿದ್ದರು. ಈ ಹಿನ್ನಲೆಯಲ್ಲಿ ಆರೋಪಿ ಕಿರಣ್ 15 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೊಡ್ಡಕಲ್ಲಸಂದ್ರದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡಿಡಿಯಾಗಿದ್ದ ಪ್ರತಿಮಾ ಬರ್ಬರ ವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದ ಪೊಲೀಸರು ಆರೋಪಿ ಕಿರಣ್ ಬಂಧಿಸಿದ್ದರು.