Sunday, 15th December 2024

ಕುಪ್ವಾರ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ

ಶ್ರೀನಗರ: ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮರಾಠ ದೊರೆ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಮಂಗಳವಾರ ಅನಾವರಣಗೊಳಿಸಿದ್ದಾರೆ.

ಶಿವಾಜಿ ಪ್ರತಿಮೆಯು ಹತ್ತೂವರೆ ಅಡಿ ಎತ್ತರವಿದೆ. ಅಮ್ಹಿ ಪೋನೆಕರ್​​ ಫೌಂಡೇಶನ್ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಸ್ಮಾರಕ ಸಮಿತಿಯ ಸಹಯೋಗದಲ್ಲಿ ನಿರ್ಮಿಸಲಾಗಿದೆ.

ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಎರಡು ಶಿವಾಜಿ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ. ಮರಾಠ ರೆಜಿಮೆಂಟ್ ವತಿಯಿಂದ 2022ರ ಜನವರಿಯಲ್ಲಿ ಈ ಪ್ರತಿಮೆಗಳನ್ನು ಅನಾವರಣ ಮಾಡಲಾಗಿದೆ.