ತುಮಕೂರು : ದೇಶದ ವಿಶ್ವವಿದ್ಯಾಲಯಗಳಿಂದ ಹೊರಬರುತ್ತಿರುವ ವಿದ್ಯಾರ್ಥಿಗಳಲ್ಲಿ ಶೇ.20ರಷ್ಟು ಜನರು ಮಾತ್ರವೇ ಉದ್ಯೋಗಕ್ಕೆ ಅರ್ಹರಿದ್ದು, ಕೌಶಲ್ಯವಿಲ್ಲದೇ ಕೇವಲ ಪದವಿ ಪಡೆದಲ್ಲಿ ಅಂತಹ ಮಕ್ಕಳಿಗೆ ಉದ್ಯೋಗಾವಕಾಶಗಳು ದುರ್ಲಭವೆಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ್‌ಪ್ರಕಾಶ್ ಪಾಟೀಲ್ ನುಡಿದರು.
ನಗರದ ಶ್ರೀದೇವಿ ಶಿಕ್ಷಣ ಸಂಸ್ಥೆಗಳ ವೈದ್ಯಕೀಯ ಕಾಲೇಜು ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಅಡ್ವಾನ್ಸ್ಡ್ ಮೆಡಿಕಲ್ ಸ್ಕಿಲ್ ಆ್ಯಂಡ್ ಸೈಮು ಲೇಷನ್, ಸೆಂಟರ್ ಆಫ್ ಎಕ್ಸ್ಲೆನ್ಸ್ ಇನ್ ಎಮ್‌ರ್ಜಿಂಗ್ ಟೆಕ್ನಾಲಜೀಸ್, ಐಡಿಯಾಲ್ಯಾಬ್ ಮತ್ತು ತಾಯಿ ಶಿಶು ಆರೋಗ್ಯ ಭಾಗ್ಯ ಯೋಜನೆಗಳನ್ನು ನ.10 ರಂದು ಸಂಜೆ 6 ಗಂಟೆಗೆ ಉದ್ಘಾಟಿಸಿ ಮಾತನಾಡುತ್ತಾ ಅವರು, ಪದವೀಧರರಿಗೆ ವಿಷಯಗಳ ಅರಿವಿದ್ದೂ ಶೈಕ್ಷಣಿಕವಾಗಿ ಉತ್ತಮ ಫಲಿತಾಂಶ ಪಡೆದಿದ್ದರೂ ಕಾರ್ಯಕ್ಷೇತ್ರಗಳಲ್ಲಿ ಉದ್ಯೋಗಕ್ಕೆ ಬೇಕಾದ ಕೌಶಲ್ಯಗಳನ್ನು ರೂಢಿಸಿಕೊಳ್ಳಲು ಕುಟುಂಬದಲ್ಲಿ ಸಂಪನ್ಮೂಲ, ಮೂಲಸೌಕರ್ಯ, ಪರಿಣಿತ ಭೋದಕರುಗಳ ಕೊರತೆಯಿಂದಾಗಿ ಕರ ಕುಶಲತೆಯಿಲ್ಲದೆ ಸಂದರ್ಶನಗಳು ಮತ್ತು ಉದ್ಯೋಗದ ಅವಕಾಶಗಳಲ್ಲಿ ವಿಫಲರಾಗುತ್ತಿರುವುದು ಹೆಚ್ಚಾಗಿ ಕಂಡು ಬರುತ್ತಿದ್ದು, ಕರ್ನಾಟಕ ಸರ್ಕಾರದಿಂದ ಕೌಶಲ್ಯಾಭಿವೃದ್ಧಿಗೆ ಅಪಾರ ಉತ್ತೇಜನ ಮತ್ತು ಪ್ರೋತ್ಸಾಹ ನೀಡಲಾಗುತ್ತಿಯೆಂದ ಅವರು ಶ್ರೀದೇವಿ ಶಿಕ್ಷಣ ಸಂಸ್ಥೆಗಳಲ್ಲಿ ಈ ನಿಟ್ಟಿನಲ್ಲಿ ಕೈಗೊಂಡಿರುವ ವ್ಯವಸ್ಥೆ ಮತ್ತು ಚಟುವಟಿಕೆಗಳನ್ನು ಪ್ರತ್ಯಕ್ಷವಾಗಿ ವೀಕ್ಷಿಸಿ ಶ್ಲಾಘಿಸಿದರು. ಈ ಸಂಬಂಧ ಸಲ್ಲಿಸಲಾದ ಪ್ರಸ್ತಾವನೆಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಭರವಸೆಯನ್ನು ಹಾರೈಸಿದರು.
ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಮುಖ್ಯಸ್ಥ ಡಾ.ಎಂ.ಆರ್.ಹುಲಿನಾಯ್ಕರ್, ಉಪಪ್ರಾಂಶುಪಾಲರಾದ ಡಾ. ರೇಖಾಗುರುಮೂರ್ತಿ ಮಾತನಾಡಿದರು.
ಸಮಾರಂಭದಲ್ಲಿ ಮಾನವ ಸಂಪನ್ಮೂಲ ಮತ್ತು ಮಾಹಿತಿ ತಂತ್ರಜ್ಞಾನ ನಿರ್ದೇಶಕಎಂ.ಎಸ್.ಪಾಟೀಲ್, ವೈದ್ಯಕೀಯ ನಿರ್ದೇಶಕರಾದ ಡಾ.ರಮಣ್ ಎಂ ಹುಲಿನಾಯ್ಕರ್, ಟ್ರಸ್ಟಿಗಳಾದ ಅಂಬಿಕಾ ಹುಲಿನಾಯ್ಕರ್, ಡಾ.ಲಾವಣ್ಯ ರಮಣ್, ಆಡಳಿತಾಧಿಕಾರಿ ಟಿ.ವಿ.ಬ್ರಹ್ಮದೇವಯ್ಯ, ಪ್ರಾಂಶುಪಾಲರಾದ ಡಾ.ಎಂ.ಎಲ್.ಹರೇಕದ್ರಕುಮಾರ್, ಶ್ರೀದೇವಿ ವೈದ್ಯಕೀಯ ಅಧೀಕ್ಷಕ ಡಾ.ಮೋಹನ್‌ಕುಮಾರ್, ಶ್ರೀದೇವಿ ಆಸ್ಪತ್ರೆಯ ಸಿ.ಇ.ಓ.ಡಾ.ಪ್ರದೀಪ್‌ಕುಮಾರ್, ರಿಸರ್ಚ್ ಡೀನ್ ಡಾ.ದಿನೇಶ್, ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಸ್ಥೆಗಳ ಪ್ರಾಂಶುಪಾಲರುಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.