Saturday, 23rd November 2024

ಮಧ್ಯಪ್ರದೇಶದ 230 ಕ್ಷೇತ್ರ, ಛತ್ತೀಸ್​ಗಢ 70 ಕ್ಷೇತ್ರಗಳಿಗೆ ಮತದಾನ ಇಂದು

ಭೋಪಾಲ್/ರಾಯಪುರ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಮಧ್ಯಪ್ರದೇಶದ ಎಲ್ಲ 230 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಹಾಗೂ ಛತ್ತೀಸ್​ಗಢ 70 ಕ್ಷೇತ್ರಗಳಿಗೆ ಅಂತಿಮ ಹಂತದ ಮತದಾನ ಪ್ರಗತಿಯಲ್ಲಿದೆ.

ಮಿಜೋರಾಂ ಸೇರಿ ಮೂರು ರಾಜ್ಯಗಳ ಮತ ಸಮರಕ್ಕೆ ತೆರೆ ಬೀಳಲಿದೆ. ರಾಜಸ್ಥಾನ (ನ.25) ಹಾಗೂ ತೆಲಂಗಾಣದಲ್ಲಿ (ನ.30) ಮತದಾನ ಇನ್ನಷ್ಟೇ ನಡೆಯಬೇಕಿದೆ.

ಮಧ್ಯಪ್ರದೇಶ ಚುನಾವಣೆ ಹೈವೋಲ್ಟೇಜ್ ಆಗಿ ಮಾರ್ಪಟ್ಟಿದೆ. ಈ ರಾಜ್ಯದಲ್ಲೂ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಇದ್ದು, ಎಲ್ಲ 230 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಮತದಾನಕ್ಕಾಗಿ 230 ಸ್ಥಾನಗಳಲ್ಲಿ 64 ಸಾವಿರದ 523 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.