ವಿಶಾಖಪಟ್ಟಣಂ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಐದು ಟಿ20 ಪಂದ್ಯಗಳ ಸರಣಿ ಶುರುವಾಗುತ್ತಿದೆ. ನಾಳೆ ಮೊದಲ ಪಂದ್ಯ ವಿಶಾಖಪಟ್ಟಣಂನ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು ಅಭಿಮಾನಿಗಳು ಕಾತರರಾಗಿದ್ದಾರೆ.
2007ರ ವಿಶ್ವಕಪ್ಗೆ ಮಾಡಿದ ತಯಾರಿಯ ರೀತಿಯಲ್ಲೇ ಹೊಸ ತಂಡ ಕಟ್ಟಲು ಬಿಸಿಸಿಐ ಚಿಂತಿಸಿದಂತಿದೆ. ಇನ್ನು 8 ತಿಂಗಳ ಕಾಲಾವಕಾಶವಿದ್ದು ತಂಡದಲ್ಲಿ ಪ್ರಯೋಗಗಳನ್ನು ಮಾಡಿ ಹೊಸ ಟೀಮ್ ಕಟ್ಟುವ ನಿರೀಕ್ಷೆ ಗೋಚರಿಸಿದೆ.
ಆಸ್ಟ್ರೇಲಿಯಾ ಏಕದಿನ ವಿಶ್ವಕಪ್ನಲ್ಲಿ ಆಡಿರುವ ಪೈಕಿ 6 ಮಂದಿಯನ್ನು ಉಳಿಸಿಕೊಂಡು, 6 ಆಟಗಾರರನ್ನು ಬದಲಿಸಿದೆ. ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದೆ.
ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್, ಶ್ರೇಯಸ್ ಅಯ್ಯರ್ (ಕೊನೆ ಎರಡು ಪಂದ್ಯದ ಉಪ ನಾಯಕ).
ಆಸ್ಟ್ರೇಲಿಯಾ: ಮ್ಯಾಥ್ಯೂ ಶಾರ್ಟ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯ್ನಿಸ್, ಟಿಮ್ ಡೇವಿಡ್, ಆಯರನ್ ಹಾರ್ಡಿ, ಸೀನ್ ಅಬಾಟ್, ನಾಥನ್ ಎಲ್ಲಿಸ್, ಆಯಡಮ್ ಝಂಪಾ, ಸ್ಪೆನ್ಸರ್ ಜಾನ್ಸನ್, ಮ್ಯಾಥ್ಯೂ ವೇಡ್, ಆಶ್ಟನ್ ಟರ್ನರ್, ಜೇಸನ್ ಬೆಹ್ರೆಂಡಾರ್ಫ್