ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಕುಮಾರ್ ಜೈನ್ ಅವರಿಗೆ ನೀಡಲಾ ಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಡಿಸೆಂಬರ್ 4 ರವರೆಗೆ ವಿಸ್ತರಿಸಿದೆ.
ಪ್ರಕರಣದ ವಿಚಾರಣೆ ನೇತೃತ್ವ ವಹಿಸಿರುವ ನ್ಯಾಯಮೂರ್ತಿ ಎಎಸ್ ಬೋಪಣ್ಣ ಅವರು ಲಭ್ಯವಾಗದ ಕಾರಣ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರಿದ್ದ ಪೀಠವು ಡಿಸೆಂಬರ್ 4ರಂದು ವಿಚಾರಣೆಯನ್ನು ಮುಂದೂಡಿತು. ಈ ಮಧ್ಯೆ, ಈ ಹಿಂದೆ ನೀಡಲಾ ಗಿದ್ದ ಮಧ್ಯಂತರ ಜಾಮೀನನ್ನು ಮುಂದಿನ ವಿಚಾರಣೆಯ ದಿನಾಂಕದವರೆಗೆ ವಿಸ್ತರಿಸಲಾಗಿದೆ ಎಂದು ಪೀಠ ಹೇಳಿದೆ.
ಇದಕ್ಕೂ ಮೊದಲು, ಜೈನ್ ಅವರ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 9 ರವರೆಗೆ ವಿಸ್ತರಿಸಿತ್ತು.
ಎಎಪಿ ನಾಯಕ ತನ್ನ ಜಾಮೀನು ಅರ್ಜಿಯು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾ ಲಯದಲ್ಲಿ ಪದೇ ಪದೆ ಪ್ರಕರಣದ ವಿಚಾರಣೆಯನ್ನು ಮುಂದೂಡಲು ಪ್ರಯತ್ನಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೇಳಿಕೊಂಡಿದೆ.
ಜೈನ್ ಅವರು ವಿಚಾರಣಾ ನ್ಯಾಯಾಲಯದಿಂದ 16 ಬಾರಿ ವಿಚಾರಣೆಯನ್ನು ಮುಂದೂಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.