Monday, 25th November 2024

ಸೋನಿಪತ್ ನಲ್ಲಿ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪ

ವದೆಹಲಿ: ಹರಿಯಾಣದ ಸೋನಿಪತ್ ನಲ್ಲಿ ಭಾನುವಾರ ಮುಂಜಾನೆ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಸೋನಿಪತ್ ನಲ್ಲಿ ಮತ್ತು 29.15 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 76.97 ಡಿಗ್ರಿ ಪೂರ್ವ ರೇಖಾಂಶದಲ್ಲಿ 5 ಕಿ.ಮೀ ಆಳದಲ್ಲಿ ಸಂಭವಿಸಿದೆ.

ಈವರೆಗೂ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಪಶ್ಚಿಮ ನೇಪಾಳದಲ್ಲಿ 6.2 ತೀವ್ರತೆಯ ಭೂಕಂಪನ ಸಂಭವಿಸಿದ ನಂತರ ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಪ್ರಬಲ ನಡುಕ ಉಂಟಾಗಿದೆ. ಇದಕ್ಕೂ ಮುನ್ನ ಅಕ್ಟೋಬರ್ 15 ರಂದು ಹರಿಯಾಣದ ಫರಿದಾಬಾದ್ ನಲ್ಲಿ 3.1 ತೀವ್ರತೆಯ ಭೂಕಂಪನ ಸಂಭವಿಸಿತ್ತು.