ಮುಂಬೈ: ಭಾರತದ ಇತಿಹಾಸದಲ್ಲಿ ಸಂಭವಿಸಿದ ಕರಾಳ ದಿನ ಇದಾಗಿದೆ.
ಪಾಕಿಸ್ತಾನದ ಕರಾಚಿಯಿಂದ ಸಮುದ್ರ ಮಾರ್ಗದ ಮೂಲಕ ಬಂದಿದ್ದ 10 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರು 2008ರ ನ.26ರಂದು ಮುಂಬೈನ ತಾಜ್ ಹೋಟೆಲ್, ಶಿವಾಜಿ ಟರ್ಮಿನಲ್ ಸೇರಿದಂತೆ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿದ್ದರು.
ಸಮುದ್ರ ಮಾರ್ಗದಿಂದ ಬಂದ ಈ ದುಷ್ಕರ್ಮಿಗಳು ತಾಜ್ ಮಹಲ್ ಹೊಟೇಲ್, ಒಬೇರಾಯ್ ಹೊಟೇಲ್, ಲಿಯೋಪೋಲ್ಡ್ ಕೆಫೆ, ನಾರಿಮನ್ ಹೌಸ್, ಛತ್ರಪತಿ ಶಿವಾಜಿ ರೈಲ್ವೆ ಟರ್ಮಿನಸ್ ಮೊದಲಾದ ಕಡೆ ಮನಬಂದಂತೆ ಬಂದೂಕು ಮತ್ತು ಬಾಂಬಿನ ಮೂಲಕ ದಾಳಿ ನಡೆಸಿದರು. ಒಟ್ಟು ನಾಲ್ಕು ದಿನಗಳ ಕಾಲ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ವಿದೇಶಿಗರೂ ಸೇರಿದಂತೆ 166 ಮಂದಿ ನಾಗರೀಕರು ಮೃತಪಟ್ಟಿದ್ದು, 300 ಜನರು ಗಾಯ ಗೊಂಡಿದ್ದರು.
ಭಯೋತ್ಪಾದನಾ ದಾಳಿಯ 15 ನೇ ವರ್ಷವನ್ನು ಗುರುತಿಸುವ ಮೂಲಕ, ಇಸ್ರೇಲ್ ಅಧಿಕೃತವಾಗಿ ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಅನ್ನು ಭಯೋ ತ್ಪಾದಕ ಸಂಘಟನೆ ಎಂದು ಘೋಷಿಸಿದೆ.