ತುಮಕೂರು: ಶಕ್ತಿಯೋಜನೆಯಿಂದ ವಿದ್ಯಾರ್ಥಿಗಳಿಗೆ ತೀವ್ರತೊಂದರೆಯಾಗುತ್ತಿದ್ದು, ಹೆಚ್ಚುವರಿ ಬಸ್ಸುಗಳನ್ನು ಓಡಿಸವ ಮೂಲಕ ಗ್ರಾಮೀಣ ಭಾಗದಿಂದ ನಗರ ಪ್ರದೇಶದ ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ಬು ನಿವಾರಿಸುವಂತೆ ಒತ್ತಾಯಿಸಿ ಕರುನಾಡ ವಿಜಯಸೇನೆ ವಿಧ್ಯಾರ್ಥಿ ಘಟಕದವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಕರುನಾಡ ವಿಜಯಸೇನೆ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಪವನ್ ಯಾದವ್, ತುಮಕೂರು ನಗರಕ್ಕೆ ಹಾಗೂ ಜಿಲ್ಲಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಹಳ್ಳಿಗಳಿಂದ ಮತ್ತು ಕುಗ್ರಾಮಗಳಿಂದ ಓದಲು ಶಾಲಾ ಕಾಲೇಜುಗಳಿಗೆ ಬರುತ್ತಾರೆ. ಅವರಿಗೆ ಸರಿಯಾದ ಸಮಯಕ್ಕೆ ಸರಕಾರಿ ಬಸ್ಸುಗಳು ಬಾರದೆ ಶಾಲಾ ಕಾಲೇಜಿಗೆ ಸಮಯಕ್ಕೆ ಸರಿಯಾಗಿ ಹೋಗಲು ತೊಂದರೆಯಾಗುತ್ತಿದೆ ಎಂದರು
ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣ ಯ್ಯ ಮಾತನಾಡಿ, ವಿದ್ಯಾರ್ಥಿಗಳು ಓದಲು ಸರಕಾರ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡುವುದರ ಜತೆಗೆ ಶಿಕ್ಷಣಕ್ಕೆ ತೊಂದರೆಯಾಗವಂತೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದರು.
ಪ್ರತಿಭಟನೆಯಲ್ಲಿ ಕರುನಾಡ ವಿಧ್ಯಾರ್ಥಿ ಘಟಕದ ಪ್ರಧಾನ ಕಾರ್ಯದರ್ಶಿ ಪುನಿತ್, ಹರೀಶ್ ಉಪಾಧ್ಯಕ್ಷರಾದ ಹೇಮಂತ್, ಮನ್ಸೂರ್, ಯುವರಾಜ್, ಪವನಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹರೀಶ್ ಸಿ.ಎಂ.ಮತ್ತಿತರರು ಪಾಲ್ಗೊಂಡಿದ್ದರು.