Saturday, 23rd November 2024

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ 1: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ (2023-24 ನೇ) ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯು 2024 ರ ಮಾರ್ಚ್ 2ರಿಂದ ಆರಂಭಗೊಂಡು ಮಾರ್ಚ್ 22 ಕ್ಕೆ ಮುಕ್ತಾಯವಾಗಲಿದೆ. ಹಾಗೂ ಎಸ್​ಎಸ್​ಎಲ್​ಸಿ ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದೆ.

ರಾಜ್ಯದ ಎಲ್ಲ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳು ಪ್ರಾಂಶುಪಾಲರುಗಳು ತಮ್ಮ ಶಾಲಾ ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಮಂಡಳಿ ಸೂಚಿಸಿದೆ. ಮಂಡಳಿಯಿಂದ ಪ್ರಕಟಿಸಿರುವ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಇಂದಿನಿಂದ ಡಿಸೆಂಬರ್ 15 ರವರೆಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ.

ಆಕ್ಷೇಪಣೆಯನ್ನು ಮಂಡಳಿಯ ಇಮೇಲ್ ವಿಳಾಸ chairpersonkseab@gmail.com ಹಾಗೂ ಹಾರ್ಡ್ ಪ್ರತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಕೊನೆಯ ದಿನಾಂಕದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸುವು ದಿಲ್ಲ ಎಂದು ಮಂಡಳಿ ತಿಳಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-1ರ ವೇಳಾಪಟ್ಟಿ:

02.03.2024 – ಕನ್ನಡ

04.03.2023 – ಇತಿಹಾಸ, ಭೌತಶಾಸ್ತ್ರ

06.03.2023 – ಸಮಾಜ ಶಾಸ್ತ್ರ, ಗಣಕ ವಿಜ್ಞಾನ, ವಿದ್ಯುನ್ಮಾನಶಾಸ್ತ್ರ

07.03.2023 – ಹಿಂದಿ

09.03.2023 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

11.03.2023 – ಇಂಗ್ಲಿಷ್

13.03.2023 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

16.03.2023 – ಭೂಗೋಳಶಾಸ್ತ್ರ, ಜೀವಶಾಸ್ತ್ರ

18.03.2023 – ರಸಾಯನಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ

20.03.2023 – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

22.03.2023 – ಅರ್ಥಶಾಸ್ತ್ರ

ಎಸ್​ಎಸ್​ಎಲ್​ಸಿ ಪರೀಕ್ಷೆ -1ರ ವೇಳಾಪಟ್ಟಿ:

25.03.2023 – ಪ್ರಥಮ ಭಾಷೆ ಕನ್ನಡ

27.03.2023 – ಸಮಾಜ ವಿಜ್ಞಾನ

30.03.2023 – ವಿಜ್ಞಾನ

02.04.2023 – ಗಣಿತ

04.04.2023 – ತೃತೀಯ ಭಾಷೆ ಹಿಂದಿ

06.04.2023 – ದ್ವಿತೀಯ ಭಾಷೆ ಇಂಗ್ಲಿಷ್

ಇದೇ ಮೊದಲ ಬಾರಿಗೆ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿಗೆ ಮೂರು ವಾರ್ಷಿಕ ಪರೀಕ್ಷೆ ನಡೆಸುವ ಘೋಷಣೆ ಮಾಡಲಾಗಿದೆ.

ಅದರಂತೆ ಮೊದಲ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಈ ಬಾರಿ ಲೋಕಸಭಾ ಚುನಾವಣೆ ಇರುವುದರಿಂದಾಗಿ ಪ್ರಸ್ತುತ ಪ್ರಕಟಿಸಿರುವ ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಬದಲಾವಣೆ ಆಗುವ ಸಾಧ್ಯತೆ ಕಡಿಮೆ ಯಾಗಿದೆ.