Sunday, 24th November 2024

ರಾಜಸ್ಥಾನ, ಹರಿಯಾಣದ 13 ಸ್ಥಳಗಳಲ್ಲಿ ’ಇಡಿ’ ಶೋಧ

ವದೆಹಲಿ: ಖಲಿಸ್ತಾನಿ ಭಯೋತ್ಪಾದಕರು ಮತ್ತು ಅವರೊಂದಿಗೆ ಸಂಬಂಧ ಹೊಂದಿರುವ ದರೋಡೆಕೋರರ ಸಂಪರ್ಕದ ಪ್ರಕರಣದಲ್ಲಿ, ಕೇಂದ್ರ ತನಿಖಾ ಸಂಸ್ಥೆ ಇಡಿ ರಾಜಸ್ಥಾನ ಮತ್ತು ಹರಿಯಾಣದ 13 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಮತ್ತು ಕಲಾ ಜತೇಡಿಗೆ ಸಂಬಂಧಿಸಿದ ಸ್ಥಳಗಳು ಸೇರಿದಂತೆ ಅವರ ಸಹಾಯಕರ ವಿರುದ್ಧ ಶೋಧ ಕಾರ್ಯಾ ಚರಣೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಮತ್ತು ಕಲಾ ಜತೇಡಿ ಅವರ ಹಲವಾರು ಸಹಾಯಕರು ಖಲಿಸ್ತಾನಿ ಬೆಂಬಲಿಗರೊಂದಿಗೆ ಸಂಪರ್ಕ ಹೊಂದಿದ್ದಾರೆ. ಮನಿ ಲಾಂಡರಿಂಗ್‌ಗೆ ಸಂಬಂಧಿಸಿದ ಸಂಪರ್ಕವನ್ನು ಬಹಿರಂಗಪಡಿಸಲು ಅವರ ವಿರುದ್ಧ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇನ್ನು 129 ಕೋಟಿ ರೂ.ಗಳ ದುರುಪಯೋಗಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮತ್ತು ಚೆನ್ನೈನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ದಾಳಿಗಳಲ್ಲಿ 45 ಕೋಟಿ ರೂ.ಗಿಂತ ಹೆಚ್ಚು ನಗದು, ಬ್ಯಾಂಕ್ ಠೇವಣಿಗಳು ಮತ್ತು ಷೇರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ನವೆಂಬರ್ 29-30 ರಂದು 14 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ.