Thursday, 12th December 2024

 ಆರ್ಟಿಕಲ್​ 370 ರದ್ದು: ಕೇಂದ್ರದ ನಿರ್ಧಾರಕ್ಕೆ ಬಹುಪರಾಕ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ಆರ್ಟಿಕಲ್​ ಅನ್ನು ತೆಗೆದು ಹಾಕಿದ್ದ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ಕೇಂದ್ರ ಸರ್ಕಾರದ ನಿರ್ಧಾರವನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿಹಿಡಿದಿದೆ.

ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವಾಗ ನ್ಯಾಯಾಲಯ ಮಧ್ಯಸ್ಥಿಕೆ ವಹಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಹೇಳಿದ್ದಾರೆ.