Sunday, 15th December 2024

ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆ

ವದೆಹಲಿ: ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಗಾದಿಗೆ ಮೋಹನ್ ಯಾದವ್ ಅವರ ಹೆಸರನ್ನು ಒಪ್ಪಲಾಗಿದೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಆಶಾ ಲಾಕ್ರಾ ಮತ್ತು ಕೆ ಲಕ್ಷ್ಮಣ್ ಅವರ ಹೆಸರುಗಳು ಚಾಲ್ತಿಯಲ್ಲಿದ್ದವು.

ಶಿವರಾಜ್ ಸಿಂಗ್ ಚೌಹಾಣ್ ಅವರಲ್ಲದೆ, ಜ್ಯೋತಿರಾದಿತ್ಯ ಸಿಂಧಿಯಾ, ನರೇಂದ್ರ ಸಿಂಗ್ ತೋಮರ್, ಕೈಲಾಶ್ ವಿಜಯವರ್ಗಿಯಾ, ಪ್ರಹ್ಲಾದ್ ಪಟೇಲ್ ಮತ್ತು ವಿಡಿ ಶರ್ಮಾ ಅವರ ಹೆಸರುಗಳು ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿದ್ದವು. ಮತ್ತೊಂದೆಡೆ, ಸಿಎಂ ಹೆಸರನ್ನು ಘೋಷಿಸುವ ಮೊದಲು, ಪ್ರಹ್ಲಾದ್ ಪಟೇಲ್ ಅವರ ನಿವಾಸದ ಭದ್ರತೆಯನ್ನು ಹೆಚ್ಚಿಸಲಾಯಿತು.

ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಗಳಿಸಿತ್ತು. ಮಧ್ಯಪ್ರದೇಶದಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ 66 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.