ತುಮಕೂರು: ಭೌತವಿಜ್ಞಾನಿ ಹಾಗೂ ಭಾರತೀಯ ಅಂತರಿಕ್ಷ ಸಂಶೋಧನ ಸಂಸ್ಥೆ (ಇಸ್ರೋ) ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ಕುಮಾರ್ ” ಸಿದ್ಧಗಂಗಾ ಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿಜ್ಞಾನ ಕ್ಷೇತ್ರದಲ್ಲಿ ಅನನ್ಯ ಸೇವೆಯನ್ನು ಸಲ್ಲಿಸಿದ ಎ.ಎಸ್.ಕಿರಣ್ಕುಮಾರ್ ಅವರಿಗೆ ಅವರ ಜೀವಮಾನದ ಸಾಧನೆ ಗುರುತಿಸಿ ಶ್ರೀ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ 2022-23ನೇ ಸಾಲಿನ ಪ್ರಶಸ್ತಿ ನೀಡಲಾಗುತ್ತಿದೆ. ಸಿದ್ಧಗಂಗಾಮಠದಲ್ಲಿ ಡಿ.17 ರಂದು ಬೆಳಗ್ಗೆ 10 ಗಂಟೆಗೆ ಡಾ. ಶ್ರೀ ಶಿವಕುಮಾರಮಹಾಸ್ವಾಮೀಜಿ ಆಶೀರ್ವಾದದೊಂದಿಗೆ ಹಾಗೂ ಶ್ರೀಮಠದ ಅಧ್ಯಕ್ಷ ಶ್ರೀ ಸಿದ್ಧಲಿಂಗಸ್ವಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಜರುಗುವ ಸಂಘದ 67ನೇ ಸರ್ವಸದಸ್ಯರ ವಾರ್ಷಿಕ ಮಹಾಧಿವೇಶನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 1 ಲಕ್ಷ ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ.
ಸಾಹಿತ್ಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ದಾವಣಗೆರೆ ಸಿದ್ದಗಂಗಾ ಸಂಸ್ಥೆ ಮುಖ್ಯಸ್ಥೆ ಜಸ್ಟಿನ್ ಡಿ’ಸೋಜಾಗೆ ಶ್ರೀಗಳ ಹೆಸರಿನ ‘ಸಿದ್ಧ ಗಂಗಾ ಶಿವಕುಮಾರಶ್ರೀ ಪ್ರಶಸ್ತಿ, ಜಾನಪದ ವಿದ್ವಾಂಸ ಬೆಂಗಳೂರಿನ ಡಾ. ಬಿ.ಎಸ್. ಸ್ವಾಮಿ ಭಾಜನರಾಗಿದ್ದಾರೆ. ಪ್ರಶಸ್ತಿಯು 15,000 ರು. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ.
ಅಂತೆಯೇ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಾಲ್ವರು ಸಾಧಕರಿಗೆ ‘ಸಂಘಸಿರಿ’ ಪ್ರಶಸ್ತಿ ನೀಡಲಾಗುತ್ತಿದ್ದು, ಹಾಸನದ ಸುಶೀಲ ಸೋಮಶೇಖರ್, ಮೈಸೂರಿನ ಡಾ. ವಚನ ಕುಮಾರಸ್ವಾಮಿ, ಬೆಂಗಳೂರಿನ ಉದ್ಯಮಿ ಎ.ನಂಜಪ್ಪ, ಮತ್ತು ಪ್ರಗತಿಪರ ರೈತ ಹೊಸಕೋಟೆಯ ಟಿ.ಮಂಜುನಾಥ್ ಆಯ್ಕೆ ಯಾಗಿದ್ದಾರೆ.