Friday, 13th December 2024

ಹೊಗೆ ಬಾಂಬ್ ದಾಳಿ ಪ್ರಕರಣ: 6 ರಾಜ್ಯಗಳಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ತನಿಖೆ

ವದೆಹಲಿ: ಸಂಸತ್ ಮೇಲಿನ ಹೊಗೆ ಬಾಂಬ್ ದಾಳಿ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ತನಿಖೆ ನಡೆಸಲು 6 ರಾಜ್ಯಗಳಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡಗಳು ಫೀಲ್ಡ್ ಗೆ ಇಳಿದಿದೆ.

ವಿಶೇಷ ಸೆಲ್ ತಂಡಗಳು 6 ರಾಜ್ಯದಲ್ಲಿ ಪ್ರಕರಣದ ತನಿಖೆ ನಡೆಸಲಿದೆ.

ಡಿ.13 ರಂದು ನಡೆದ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಯ ತನಿಖೆಗಾಗಿ ದೆಹಲಿ ಪೊಲೀಸ್ ವಿಶೇಷ ಘಟಕದ ತಂಡಗಳು ರಾಜಸ್ಥಾನ, ಹರಿಯಾಣ, ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ತನಿಖೆ ನಡೆಸಲಿದೆ.

ಸಂಸತ್ ಭವನದಲ್ಲಿ ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ಭದ್ರತಾ ಲೋಪ ಎದುರಾಗಿತ್ತು. ಇಬ್ಬರು ಅಪರಿಚಿತರು ಲೋಕಸಭೆಯಿಂದ ಗ್ಯಾಲರಿಯಿಂದ ಸಂಸದರು ಕುಳಿತುಕೊಳ್ಳುವ ಸ್ಥಳಕ್ಕೆ ನೆಗೆದು ಕುರ್ಚಿಯಿಂದ ಕುರ್ಚಿಗೆ ಎಗರುತ್ತಾ ಬಣ್ಣಗಳ ಹೊಗೆ ಬರುವ ವಸ್ತುಗಳನ್ನ ಸಿಡಿಸಿದ್ದರು.