ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯಿಂದ ಡಿ.23ರಂದು ನಡೆಯುವ ರೈತರ ಮಹಾಧಿವೇಶನದ ಭಿತ್ತಿಪತ್ರವನ್ನು ಮೈಸೂರಿನಲ್ಲಿ ಬಿಡುಗಡೆಗೊಳಿಸಲಾಯಿತು.
ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ದೇಶದ ಎಲ್ಲ ರಾಜ್ಯದ ರೈತ ಸಂಘಟನೆಗಳು ಒಗ್ಗೂಡಿ ಡಿ.20 ರಂದು ಕೇರಳದ ಪಾಲಕಾಡ್ನಲ್ಲಿ, ಡಿ.21 ತಮಿಳುನಾಡಿನ ಚೆನ್ನೈನಲ್ಲಿ, ಡಿ.23 ರಂದು ಕರ್ನಾಟಕದ ಬೆಂಗಳೂರಿನಲ್ಲಿ ಮತ್ತು ಡಿ.26ರಂದು ತೆಲಂಗಾಣದ ಹೈದರಾಬಾದ್ನಲ್ಲಿ ಬೃಹತ್ ಅಧಿವೇಶನಗಳನ್ನು ನಡೆಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ರೈತರ ಎಚ್ಚರಿಕೆಯ ಶಕ್ತಿ ಪ್ರದರ್ಶನ ನಡೆಯಲಿದೆ ಎಂದರು.
ರೈತರ ಬೆಳೆ ಸಾಲದ ಬಡ್ಡಿಮನ್ನಾ ಎನ್ನುವುದು ನಾಟಕೀಯವಾಗಿದೆ. ರೈತರ ಕೃಷಿ ಸಾಲ ಸಂಪೂರ್ಣ ಮನ್ನಾಕ್ಕಾಗಿ ಡಿ.23 ರಂದು ಬೆಂಗಳೂರಿನಲ್ಲಿ ರೈತರ ಮಹಾಧಿವೇಶನ ನಡೆಯಲಿದೆ. ಸಾಲ ಮನ್ನಾ ಆಗದಂತೆ ವಂಚಿಸಲು ಹೆದರಿಸಿ ಆಂಗ್ಲ ಭಾಷೆಯ ಪತ್ರಕ್ಕೆ ರೈತರ ಸಹಿ ಪಡೆದು ಸಾಲ ನವೀಕರಣ ಮಾಡು ತ್ತಿದ್ದಾರೆ. ಇದರಿಂದ ರೈತರು ಸಾಲ ಮನ್ನಾದಿಂದ ವಂಚಿತವಾಗುತ್ತಿದ್ದಾರೆ. ಈ ಬಗ್ಗೆ ರೈತರು ಜಾಗೃತರಾಗಿರಬೇಕು ಎಂದು ಹೇಳಿದರು.
ಇದೇ ದಿನ ರೈತರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಡಿ.23 ರಂದು ಸಾಲ ಮನ್ನಾ ಕೋರಿಕೆ ಅರ್ಜಿ ಸಲ್ಲಿಸಲಾಗುತ್ತದೆ.