ನವದೆಹಲಿ: 2024 ಜನವರಿ 26ರ ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಮಖ್ಯ ಅತಿಥಿಯಾಗಿ ಭಾಗವಹಿಸುವ ಸಾಧ್ಯತೆಯಿದೆ.
ಮೊದಲು ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ ಗಣರಾಜೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬರಲು ಸಾಧ್ಯವಾಗುವುದಿಲ್ಲ ಎಂದು ಬೈಡನ್ ಹೇಳಿರುವುದಾಗಿ ತಿಳಿದು ಬಂದಿದೆ.
ಈಗ 2024 ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಭಾಗವಹಿಸುವ ಸಾಧ್ಯತೆಯಿದೆ.