ಪಾಟ್ನಾ: ಬಿಹಾರ ಭೇಟಿ ವೇಳೆ ಆರ್ ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮೇಲೆ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‍ಐ ಹಾಗೂ ಇಸ್ಲಾಮಿಕ್ ಭಯೋತ್ಪಾದಕರಿಂದ ದಾಳಿ ನಡೆಯುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಮೋಹನ್ ಭಾಗವತ್ ಅವರು ಈಗಾಗಲೇ ಝಡ್ (Z) ಮಾದರಿಯ ಭದ್ರತೆಯನ್ನು ಹೊಂದಿದ್ದಾರೆ. ಆದರೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗ ಲೆಂದು ಎರಡು ದಿನಗಳ ಭೇಟಿಗಾಗಿ ಪಾಟ್ನಾಗೆ ಆಗಮಿಸಿರುವ ಭಾಗವತ್ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸುವ ಭಾಗಲ್ಪುರದಲ್ಲಿ ಪ್ರತಿಯೊಂದು ವಾಹನ, ವಸತಿಗೃಹ, ಜನದಟ್ಟಣೆ ಪ್ರದೇಶಗಳಲ್ಲಿ ಪ್ರತಿಯೊಬ್ಬರನ್ನೂ ಕೂಲಂಕುಷ ವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಗುಪ್ತಚರ ಇಲಾಖೆಯ ಎಚ್ಚರಿಕೆಯಿಂದಾಗಿ ಮೋಹನ್ ಭಾಗವತ್ ಅವರಿಗೆ ಎಲ್ಲಾ ರೀತಿಯ ಭದ್ರತೆಗಳನ್ನು ಒದಗಿಸಲಾಗಿದೆ ಎಂದು ಬಿಹಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.