ತುಮಕೂರು: ಸಂಸತ್ತಿನ ಮೇಲೆ ನಡೆದ ದಾಳಿ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿದ ಸಂಸದರನ್ನು ಅಮಾನತ್ತುಗೊಳಿಸಿರುವ ಬಿಜೆಪಿ ಪಕ್ಷದ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಿ.ಹೆಚ್.ರಸ್ತೆ ಮೂಲಕ ಟೌನ್ ಹಾಲ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ಕಾಂಗ್ರೆಸ್ ಕಾರ್ಯ ಕರ್ತರು ಕೆಲಕಾಲ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ, ಸಂಸತ್ತಿನ ಮೇಲೆ ನಡೆದ ದಾಳಿಯ ಕುರಿತು ವಿರೋಧ ಪಕ್ಷಗಳ ಪ್ರಶ್ನೆಗೆ ಪ್ರಧಾನಿ ಮತ್ತು ಗೃಹ ಸಚಿವರು ಉತ್ತರಿಸುವಂತೆ ಒತ್ತಾಯಿಸಿದ ವಿರೋಧ ಪಕ್ಷದ ಸುಮಾರು 146 ಸಂಸದರನ್ನು ಒಂದು ಅಧಿವೇಶನ ಪೂರ್ಣ ಅಮಾನತ್ತು ಮಾಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ಇದೊಂದು ರೀತಿಯಲ್ಲಿ ವಿರೋಧ ಪಕ್ಷಗಳೇ ಇಲ್ಲದಂತೆ ಮಾಡುವ ಸರ್ವಾಧಿಕಾರಿ ಧೋರ ಣೆಯಾಗಿದ್ದು, ಇದರ ವಿರುದ್ದ ರಾಷ್ಟçದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿದೆ ಎಂದರು.
ಕೆಪಿಸಿಸಿ ವೈದ್ಯಕೀಯ ಘಟಕದ ಉಪಾಧ್ಯಕ್ಷೆ ಡಾ. ಫರ್ಜಾನ ಬೇಗಂ ಮಾತನಾಡಿ, ಸಂಸತ್ತು ಎಂಬುದು ಭಾರತೀಯರ ದೇವಾಲಯವಿದ್ದಂತೆ. ಅಂತಹ ಕೇಂದ್ರದ ಮೇಲೆ ದಾಳಿಯಾದಾಗ ಅದಕ್ಕೆ ಕಾರಣಗಳು ಮತ್ತು ಪರಿಹಾರೋಪಾಯಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಗೃಹ ಸಚಿವ ಅಮಿತ್ ಷಾ ಮತ್ತು ಪ್ರಧಾನ ಮಂತ್ರಿ ಉತ್ತರ ನೀಡಬೇಕೆಂಬ ಅಪೇಕ್ಷೆ ಇಡೀ ದೇಶದ ಜನರದ್ದಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್ ಮಾತನಾಡಿ, 146 ಸಂಸದರ ಅಮಾನತ್ತು ಕ್ರಮ ಸರ್ವಾಧಿಕಾರಿ ಧೋರಣೆ ಯಾಗಿದೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರುಗಳು ಪ್ರಜಾಪ್ರಭುತ್ವವನ್ನು ತೆಗೆದು ರಾಜಪ್ರಭುತ್ವ ಸ್ಥಾಪಿಸುವ ಹುನ್ನಾರ ನಡೆಸಿ ದಂತಿದೆ. ಇಡೀ ದೇಶದ ಜನತೆ ಇದನ್ನು ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ. ಹಾಗಾಗಿ ಕಾಂಗ್ರೆಸ್ ಕಾರ್ಯರ್ತರು ಈ ವಿಚಾರವನ್ನು ಜನರ ನಡುವೆ ತೆಗೆದುಕೊಂಡು ಹೋಗುವ ಕೆಲಸ ಮಾಡಬೇಕು ಎಂದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ , ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಆರ್. ರಾಮಕೃಷ್ಣ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮಹೇಶ್, ಫಯಾಜ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಗಿರೀಶ್, ಲೋಕೇಶ್, ಮುಖಂಡರಾದ ನಯಾಜ್ ಅಹಮದ್, ನಿಂಗರಾಜು.ಬಿ.ಜಿ., ವಾಲೆಚಂದ್ರಯ್ಯ, ಪುಟ್ಟರಾಜು, ಸುಜಾತ, ನಾಗಮಣಿ, ಭಾಗ್ಯ, ಸವಿತಾ, ಗೀತಾ, ಜ್ವಾಲಾಮಾಲಾ ರಾಜಣ್ಣ, ಕೆಂಪಣ್ಣ, ಶೆಟ್ಟಾಳಯ್ಯ, ಮೆಹಬೂಬ್ ಪಾಷ, ಶಿವಾಜಿ, ನರಸಿಂಹಯ್ಯ, ಕುಂಚ್ಚAಗಿ ರಮೇಶ್, ಕೆಂಪರಾಜು, ಹೆಚ್.ಸಿ.ಹನುಮಂತಯ್ಯ, ರೇವಣ್ಣಸಿದ್ದಯ್ಯ, ನ್ಯಾತೇಗೌಡ, ರಾಘವೇಂದ್ರಸ್ವಾಮಿ, ಸಿ. ಭಾನುಪ್ರಕಾಶ್, ನಯಾಜ್ ಅಹಮದ್, ಅಸ್ಲಾಂ ಪಾಷ, ಇನಾಯತ್, ನಟರಾಜು, ಸೇರಿದಂತೆ ನೂರಾರು ಮಂದಿ ಕಾರ್ಯ ಕರ್ತರು ಭಾಗವಹಿಸಿದ್ದರು.