ಲಖನೌ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಉತ್ತರಪ್ರದೇಶದ ಅಯೋಧ್ಯೆಯ ರೈಲ್ವೇ ನಿಲ್ದಾಣಕ್ಕೆ `ಅಯೋಧ್ಯಾ ಧಾಮ್’ ಜಂಕ್ಷನ್ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಬಹುವರ್ಷಗಳ ದೇಶದ ಜನರ ಕನಸು ನನಸಾಗುತ್ತಿದೆ. ಜನವರಿ 22ರಂದು ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಅಂದೇ ರಾಮ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯಾಗಲಿದೆ.
ಮಾಹಿತಿ ಹಂಚಿಕೊಂಡಿರುವ ಸಂಸದ ಲುಲ್ಲು ಸಿಂಗ್, ಡಿ.30ರಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆ ರೈಲ್ವೇ ನಿಲ್ದಾಣಕ್ಕೆ `ಅಯೋಧ್ಯಾ ಧಾಮ್’ ರೈಲ್ವೇ ನಿಲ್ದಾಣ ಎಂದು ಮರುನಾಮಕರಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಅಯೋಧ್ಯಾ ಧಾಮ್ ರೈಲ್ವೇ ನಿಲ್ದಾಣದ ಪ್ರತಿ ಎಸ್ಕಲೇಟರ್ ಹಾಗೂ ಗೋಡೆಗಳ ಮೇಲೆ ಭಗವಾನ್ ರಾಮನ ಭಿತ್ತಿಚಿತ್ರಗಳನ್ನು ಚಿತ್ರಿಸಲಾಗಿದೆ. ಇದು ಸಾಕ್ಷಾತ್ ರಾಮನ ಸನ್ನಿದಾನ ಎನ್ನುವ ಭಾವ ಎಲ್ಲರನ್ನು ಮೂಡುತ್ತದೆ. ಅಷ್ಟು ಸುಂದರವಾಗಿ ರಾಮನ ಚಿತ್ರಗಳನ್ನು ಎಲ್ಲ ಗೋಡೆ ಮೇಲೂ ಚಿತ್ರಿಸ ಲಾಗಿದೆ.
ರೈಲು ನಿಲ್ದಾಣದಲ್ಲಿ ಲಿಫ್ಟ್‌ಗಳು, ಪ್ರವಾಸಿ ಮಾಹಿತಿ ಕೇಂದ್ರ ಮುಖ್ಯ ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚುವರಿಯಾಗಿ ಕಲ್ಪಿಸಲಾಗಿದೆ. ರೈ ಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಥವಾ ಭಕ್ತರಿಗೆ ಏನಾದರೂ ಆರೋಗ್ಯ ತೊಂದರೆಗಳಿದ್ದಲ್ಲಿ ನಿಲ್ದಾಣದಲ್ಲಿ ಅವರಿಗೆ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.