ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ -2024ರ ಸಂಬಂಧ ಭಾರತ ಚುನಾವಣಾ ಆಯೋಗವು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿಗೆ ಜನವರಿ 12, 2024 ಶುಕ್ರವಾರ ಕೊನೆಯ ದಿನಾಂಕವಾಗಿರುತ್ತದೆ. ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗದ ಅನುಮತಿಯನ್ನು ಪಡೆಯುವ ದಿನಾಂಕ ಜನವರಿ 17, 2024 ಬುಧವಾರ. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಜನವರಿ 22, 2024 ಸೋಮವಾರ.
ಜನವರಿ 22, 2024ರಂದು ಸಾರ್ವಜನಿಕರ ಮಾಹಿತಿಗಾಗಿ ಅಂತಿಮ ಮತದಾರರ ಪಟ್ಟಿಗಳನ್ನು ನಿಗಧಿತ ಸ್ಥಳಗಳಲ್ಲಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.