ನವದೆಹಲಿ: ವಾಯುಪಡೆಯ ಧೀರ ಯೋಧರಿಗೆ 88ನೇ ವಾಯುಸೇನಾ ದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ.
ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ವಾಯುಪಡೆಯ ದಿನದಂದು ಭಾರತೀಯ ವಾಯುಸೇನೆಯ ಎಲ್ಲಾ ವೀರ ಯೋಧರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ. ಭಾರತಾಂಬೆ ರಕ್ಷಿಸಲು ನಿಮ್ಮ ಧೈರ್ಯ, ಶೌರ್ಯ ಮತ್ತು ಸಮರ್ಪಣೆ ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ವೀರ ಯೋಧರಿಗೆ ಶುಭಾಶಗಳನ್ನು ಕೋರಿದ್ದು, ನಮ್ಮ ಆಕಾಶವನ್ನು ಭದ್ರಪಡಿಸು ವಲ್ಲಿ ಮತ್ತು ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ದಲ್ಲಿ ನಾಗರಿಕರಿಗೆ ಸಹಾಯ ಮಾಡುವಲ್ಲಿ ಐಎಎಫ್‌ನ ಕೊಡುಗೆ ಅಪಾರವಾದದು ಎಂದು ಹೇಳಿದ್ದಾರೆ.