Thursday, 12th December 2024

ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ತೆಂಡೂಲ್ಕರ್ ಗೆ ಆಹ್ವಾನ

ವದೆಹಲಿ: ಜ.22ರಂದು ರಾಮಮಂದಿರ ಉದ್ಘಾಟನೆಯ ಜೊತೆಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಗೆ ಆಹ್ವಾನ ನೀಡಲಾಗಿದೆ.

ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸಲು ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗೆ ಆಹ್ವಾನಿಸಲಾಗಿದೆ.

ರಾಮಮಂದಿರ ಉದ್ಘಾಟನೆಗೆ ಅನೇಕ ಮಠಾಧೀಶರು ಹೋಗೋದಕ್ಕೆ ನಿರಾಕರಿಸಿದರೆ,  ಕಾಂಗ್ರೆಸ್ ಮಾತ್ರ ಅಪೂರ್ಣ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಾವು ಹೋಗಲ್ಲ ಎಂದು ಹೇಳಿದೆ. ಈ ಮೂಲಕ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಸಿದೆ.

ಇದೇ ಸಂದರ್ಭದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ.