ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ಘಟಕ ಲೋಕಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಪಕ್ಷ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ.
39 ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ಹೊಸದಾಗಿ ನೇಮಕ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಬಿಜೆಪಿಗೆ ಸಹ ಹೊಸ ಸಾರಥಿ ನೇಮಕವಾಗಿದೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭಾನುವಾರ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ‘ಪಕ್ಷದ ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ನೂತನ ಜಿಲ್ಲಾಧ್ಯಕ್ಷರುಗಳಿಗೆ ಹಾಗೂ ವಿವಿಧ ಘಟಕಗಳಿಗೆ ನಿಯುಕ್ತಿಗೊಂಡಿ ರುವ ನೂತನ ಪದಾಧಿಕಾರಿಗಳಿಗೆ ಆತ್ಮೀಯ ಅಭಿನಂದನೆಗಳು’ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆ ಬೆನ್ನಲ್ಲೇ 39 ಜಿಲ್ಲಾ ಘಟಕಗಳ ಅಧ್ಯಕ್ಷರ ನೇಮಕ ಮಾಡಿದ ಬಿಜೆಪಿ ‘ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ನಿರೀಕ್ಷೆ ಮೀರಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುವ ಮೂಲಕ ಮುಂಬರುವ ಲೋಕಸಮರದಲ್ಲಿ ತಾವು ನಿರ್ಣಾಯಕ ಪಾತ್ರ ವಹಿಸಿ, ಸಂಘಟನೆಗೆ ಬಲ ತುಂಬುವ ನಿಟ್ಟಿನಲ್ಲಿ ಶ್ರಮಿಸುತ್ತೀರೆಂದು ನಂಬಿದ್ದೇನೆ. ನಿಮ್ಮ ಸಂಘಟನೆಯ ಹಾದಿ ಸುಗಮವಾಗಿ ಸಾಗಲೆಂದು ಹಾರೈಸುತ್ತೇನೆ’ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ಕುಮಾರಸ್ವಾಮಿ ಲೋಕಸಭಾ ಚುನಾವಣೆ ತಂತ್ರಗಾರಿಕೆ! ಚಿಕ್ಕಮಗಳೂರು ಬಿಜೆಪಿ ಘಟಕ ಚಿಕ್ಕಮಗಳೂರು ಬಿಜೆಪಿ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ದೇವರಾಜ್ ಶೆಟ್ಟಿ ನೇಮಕರಾಗಿದ್ದಾರೆ. ಈ ಹುದ್ದೆಗೆ ತೀವ್ರ ಪೈಪೋಟಿ ಇತ್ತು, ಅಂತಿಮವಾಗಿ ದೇವರಾಜ್ ಶೆಟ್ಟಿ ನೇಮಕ ಮಾಡಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.