ಅಡಿಲೇಡ್: ಜ.17ರಂದು ಅಡಿಲೇಡ್‌ನಲ್ಲಿ ನಡೆಯಲಿರುವ ಬಹು ನಿರೀಕ್ಷಿತ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಆತಿಥೇಯ ಆಸ್ಟ್ರೇಲಿಯಾ ಮತ್ತು ಪ್ರವಾಸಿ ವೆಸ್ಟ್ ಇಂಡೀಸ್ ಎರಡೂ ತಂಡಗಳು ತಮ್ಮ ಆಡುವ 11ರ ಬಳಗವನ್ನು ಪ್ರಕಟಿಸಿವೆ.
ಡೇವಿಡ್ ವಾರ್ನರ್ ನಿವೃತ್ತಿಯೊಂದಿಗೆ, ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್ ತಂಡಕ್ಕೆ ಮರಳುತ್ತಿದ್ದಾರೆ. ನಿರ್ಣಾಯಕ 4ನೇ ಕ್ರಮಾಂಕವನ್ನು ಪಡೆದು ಕೊಳ್ಳಲಿದ್ದಾರೆ.
ಉಸ್ಮಾನ್ ಖವಾಜಾ ಅವರೊಂದಿಗೆ ಅನುಭವಿ ಬ್ಯಾಟರ್ ಸ್ಟೀವನ್ ಸ್ಮಿತ್ ಅವರು ಆಸ್ಟ್ರೇಲಿಯಾ ತಂಡದ ಇನ್ನಿಂಗ್ಸ್ ಆರಂಭಿಸುವ ಜವಾಬ್ದಾರಿ ತೆಗೆದು ಕೊಳ್ಳಲಿದ್ದಾರೆ.
ವೆಸ್ಟ್ ಇಂಡೀಸ್ ತಂಡಕ್ಕೆ ಸಂಬಂಧಿಸಿದಂತೆ ನಾಯಕ ಕ್ರೇಗ್ ಬ್ರಾಥ್‌ವೈಟ್ ಅವರು ಮೊದಲ ಟೆಸ್ಟ್ ಪಂದ್ಯದಲ್ಲಿ ಮೂವರು ಹೊಸ ಆಟಗಾರರನ್ನು ಟೆಸ್ಟ್ ಕ್ರಿಕೆಟ್‌ಗೆ ಪರಿಚಯಿಸುವುದಾಗಿ ಬಹಿರಂಗಪಡಿಸಿದ್ದಾರೆ.
ಹೊಸ ಆಟಗಾರರಲ್ಲಿ ಮಧ್ಯಮ ಕ್ರಮಾಂಕದ ಜೋಡಿಗಳಾದ ಕವೆಮ್ ಹಾಡ್ಜ್ ಮತ್ತು ಜಸ್ಟಿನ್ ಗ್ರೀವ್ಸ್, ಉದಯೋನ್ಮುಖ ವೇಗಿ ಶಮರ್ ಜೋಸೆಫ್ ಸೇರಿದ್ದಾರೆ. ಕ್ಯಾಮೆರಾನ್ ಗ್ರೀನ್, ತಂಡದ ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಆಸ್ತಿಯಾಗಿ ತಮ್ಮ ಸಾಮರ್ಥ್ಯ ವನ್ನು ಪ್ರದರ್ಶಿಸುವ ಮೂಲಕ 4ನೇ ಸ್ಥಾನದಲ್ಲಿ ಪ್ರವರ್ಧಮಾನಕ್ಕೆ ಬರಲು ಸಜ್ಜಾಗಿದ್ದಾರೆ.
ವೆಸ್ಟ್ ಇಂಡೀಸ್ ತಂಡ, ಆಲ್‌ರೌಂಡರ್‌ಗಳಾದ ಜೇಸನ್ ಹೋಲ್ಡರ್ ಮತ್ತು ಕೈಲ್ ಮೇಯರ್ಸ್ ಅನುಪಸ್ಥಿತಿಯು ಸವಾಲುಗಳನ್ನು ಎದುರಿಸುತ್ತಿದೆ.
ಮೊದಲ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ಆಡುವ 11ರ ಬಳಗ
ಉಸ್ಮಾನ್ ಖವಾಜಾ, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್.
ವೆಸ್ಟ್ ಇಂಡೀಸ್ ಆಡುವ 11ರ ಬಳಗ
ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಾಗೆನರೈನ್ ಚಂದ್ರಪಾಲ್, ಕಿರ್ಕ್ ಮೆಕೆಂಜಿ, ಅಲಿಕ್ ಅಥಾನಾಜೆ, ಕವೆಮ್ ಹಾಡ್ಜ್, ಜಸ್ಟಿನ್ ಗ್ರೀವ್ಸ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಗುಡಾಕೇಶ್ ಮೋಟಿ, ಅಲ್ಜಾರಿ ಜೋಸೆಫ್, ಶಮರ್ ಜೋಸೆಫ್, ಕೆಮರ್ ರೋಚ್.