ಬೆಂಗಳೂರು: ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಲು ಕೊಹ್ಲಿಗೆ ಇತ್ತೀಚೆಗೆ ಆಹ್ವಾನ ಬಂದಿದೆ. ಕಾರ್ಯಕ್ರಮಕ್ಕಾಗಿ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜ.22 ರಂದು ಅಯೋಧ್ಯೆಗೆ ತಲುಪಬಹುದು.
ಈ ಹಿನ್ನೆಲೆಯಲ್ಲಿ ಕೊಹ್ಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ ಅನುಮತಿ ಸಿಕ್ಕಿದೆ. ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಅವರೊಂದಿಗೆ ಜನವರಿ 22 ರಂದು ಅಯೋಧ್ಯೆಗೆ ತಲುಪುವ ನಿರೀಕ್ಷೆಯಿದೆ.
ಅಫ್ಘಾನಿಸ್ತಾನ ವಿರುದ್ಧದ ಟಿ 20 ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯವನ್ನು ಭಾರತ ಬುಧವಾರ ಆಡಲಿದೆ. ನಂತರ ಕೊಹ್ಲಿ ಹೈದರಾಬಾದ್ ಗೆ ತೆರಳಲಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಲ್ಲಿ ನಡೆಯಲಿದೆ.
ಇತ್ತೀಚೆಗೆ ವಿರಾಟ್ ಮತ್ತು ಅನುಷ್ಕಾ ಅವರನ್ನು ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.