ಶಿಮ್ಲಾ: ‘ಅಟಲ್ ಟನಲ್’ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ರೊಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ.
ಹಿಮಾಚಲ ಪ್ರದೇಶದ ರೋಹ್ಟಂಗ್ನಲ್ಲಿ ಅ.3 ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್, ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ಸೇರಿ ಇತರ ಗಣ್ಯರು ಪಾಲ್ಗೊಂಡಿದ್ದರು. ಇವರಲ್ಲಿ ಕುಲ್ಲು ಜಿಲ್ಲೆಯ ಬಂಜಾರ ಕ್ಷೇತ್ರದ ಶಾಸಕ ಸುರೇಂದ್ರ ಶೌರಿ ಅವರಿಗೆ ವೈರಸ್ ತಗುಲಿದೆ.
ಶೌರಿ ಅವರು ಅ.1 ರಂದು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಅ.2 ರ ಸಂಜೆಯೇ ವರದಿ ಪಾಸಿ ಟಿವ್ ಬಂದಿದೆ. ಆದರೂ ಅ.3 ರಂದು ಸುರಂಗಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಭಾಗ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.