ನವದೆಹಲಿ: ದೇಶದಲ್ಲಿ ಹೊಸದಾಗಿ 160 ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,886ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಬುಧವಾರ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್-19 ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಕರ್ನಾಟಕ ಹಾಗೂ ಕೇರಳದ ತಲಾ ಒಬ್ಬರು ಎಂದು ವರದಿಯಾಗಿದೆ.
2023ರ ಡಿಸೆಂಬರ್ 5ರವರೆಗೆ ದೈನಂದಿನ ಕೋವಿಡ್-19 ಪ್ರಕರಣಗಳ ಸಂಖ್ಯೆ ಕಡಿಮೆಯಾಗಿತ್ತು, ಆದರೆ ಹೊಸ ರೂಪಾಂತರಿ ಮತ್ತು ಶೀತ ಹವಾಮಾನ ದಿಂದಾಗಿ ಪ್ರಕರಣಗಳು ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಸಚಿವಾಲಯದ ಅಧಿಕೃತ ವೆಬ್‌ಸೈಟ್ ಪ್ರಕಾರ, ದೇಶದಾದ್ಯಂತ ಕೋವಿಡ್-19 ಸೋಂಕಿನಿಂದ 4.4 ಕೋಟಿಗೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ. ಒಟ್ಟಾರೆ ಶೇಕಡಾ 98.81ರಷ್ಟು ಮಂದಿ ಚೇತರಿಸಿಕೊಂಡಿದ್ದಾರೆ. ಇದುವರೆಗೆ 220.67 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ತಿಳಿಸಿದೆ.