Thursday, 12th December 2024

ಸುಪ್ರೀಂ ನ್ಯಾಯಮೂರ್ತಿಯಾಗಿ ನ್ಯಾ.ಪಿ.ಬಿ.ವರಾಳೆ ಪ್ರಮಾಣ ವಚನ

ವದೆಹಲಿ: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸುಪ್ರೀಂ ಕೋರ್ಟ್‌ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ವರಾಳೆ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಕೊಲಿಜಿಯಂ ಮಾಡಿದ್ದ ಶಿಫಾರಸಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ ಬಳಿಕ ರಾಷ್ಟ್ರಪತಿಯವರು ನೇಮಕ ಆದೇಶ ಹೊರಡಿಸಿದ್ದರು.

ಇದರಿಂದಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ರನ್ನು ನೇಮಕ ಮಾಡಬೇಕೆಂಬ ಶಿಫಾರಸಿಗೂ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಅವರು ಫೆ. 24ರಂದು ನಿವೃತ್ತರಾಗಲಿದ್ದಾರೆ.